ಬಾಗಲಕೋಟೆ: ಬಿಜೆಪಿ ಸರ್ಕಾರ ಒಂದು ವರ್ಷದ ಆಡಳಿತದಲ್ಲಿ, ಕರ್ನಾಟಕ ಭೂ ಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ ಹಾಗೂ ಕಾರ್ಮಿಕ ಕಾಯ್ದೆಗಳಿಗೆ ತಿದ್ದುಪಡಿ ಮಾಡುತ್ತಿರುವುದನ್ನು ವಿರೋಧಿಸಿ ಬಾದಾಮಿ ಪಟ್ಟಣದಲ್ಲಿ ಜೆಡಿಎಸ್ ಪಕ್ಷದ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಭೂ ಸುಧಾರಣಾ ಕಾಯ್ದೆ ವಿರೋಧಿಸಿ ಬಾಗಲಕೋಟೆಯಲ್ಲಿ ಜೆಡಿಎಸ್ ಪ್ರತಿಭಟನೆ - JDS protest in Bagalkot
ಭೂ ಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ ಹಾಗೂ ಕಾರ್ಮಿಕ ಕಾಯ್ದೆಗಳಿಗೆ ತಿದ್ದುಪಡಿ ಮಾಡುತ್ತಿರುವುದನ್ನು ವಿರೋಧಿಸಿ ಬಾದಾಮಿ ಪಟ್ಟಣದಲ್ಲಿ ಜೆಡಿಎಸ್ ಪಕ್ಷದ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಜೆಡಿಎಸ್ ಪಕ್ಷದ ಜಿಲ್ಲಾ ಅಧ್ಯಕ್ಷರಾದ ಹನಮಂತ ಮಾವಿನಮರದ ನೇತೃತ್ವದಲ್ಲಿ ಬಾದಾಮಿ ಪಟ್ಟಣದ ಪ್ರಮುಖ ರಸ್ತೆಯಲ್ಲಿ ಪ್ರತಿಭಟನೆ ಮೆರವಣಿಗೆ ನಡೆಸಿ, ಸರ್ಕಾರದ ವಿರುದ್ಧ ಘೋಷಣೆ ಹಾಕಿ ಆಕ್ರೋಶ ವ್ಯಕ್ತಪಡಿಸಿದರು. ನಂತರ ತಹಶೀಲ್ದಾರ್ ಕಚೇರಿಗೆ ತೆರಳಿದರು.
ಈ ಸಂದರ್ಭದಲ್ಲಿ ಜೆಡಿಎಸ್ ಪಕ್ಷದ ಜಿಲ್ಲಾಧ್ಯಕ್ಷ ಹನಮಂತ ಮಾವಿನಮರದ ಮಾತನಾಡಿ, ರೈತವಿರೋಧಿ, ಕಾರ್ಮಿಕ ವಿರೋಧಿ ಹಾಗೂ ಜನ ವಿರೋಧಿ ನೀತಿಗಳನ್ನು ಸುಗ್ರೀವಾಜ್ಞೆ ಮುಖಾಂತರ ಜಾರಿಗೆ ತರುತ್ತಿರುವ ಸರ್ಕಾರದ ಕ್ರಮವನ್ನು ಖಂಡಿಸಿದರು. ಸದರಿ ತಿದ್ದುಪಡಿಗಳ ಬಗ್ಗೆ ಪುನರ್ ಪರಿಶೀಲನೆ ಮಾಡಿ, ಈ ತಿದ್ದುಪಡಿಗಳನ್ನು ಹಿಂಪಡಿಯಬೇಕೆಂದು, ಮುಖ್ಯಮಂತ್ರಿಗಳಾದ ಯಡಿಯೂರಪ್ಪನವರಿಗೆ ಹಾಗೂ ರಾಜ್ಯಪಾಲರಿಗೆ ತಹಶೀಲ್ದಾರರ ಮುಖಾಂತರ ಮನವಿ ಸಲ್ಲಿಸಿದರು.