ಬಾಗಲಕೋಟೆ:ಜಿಲ್ಲೆಯಲ್ಲಿ ಹಿಜಾಬ್ ಹಾಗೂ ಕೇಸರಿ ವಿವಾದ ತೀವ್ರಗೊಂಡಿದೆ. ರಬಕವಿ ಬನಹಟ್ಟಿ ಪಟ್ಟಣದಲ್ಲಿ ಕಲ್ಲು, ಚಪ್ಪಲಿ ತೂರಾಟ ಹಾಗೂ ಲಾಠಿ ಚಾರ್ಜ್ ನಡೆದಿದ್ದು, ಘಟನೆಯಲ್ಲಿ ಓರ್ವ ಗಾಯಗೊಂಡಿದ್ದಾನೆ.
ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಒಂದೆಡೆ ಕೇಸರಿ ಶಾಲ್ ಹಾಕಿದ ವಿದ್ಯಾರ್ಥಿಗಳು, ಇನ್ನೊಂದೆಡೆ ಹಿಜಾಬ್ ಧರಿಸಿದ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಕೇಸರಿ ಧರಿಸಿದ ವಿದ್ಯಾರ್ಥಿಗಳಿಂದ ಕಾಲೇಜಿನ ಆವರಣದ ಒಳಗೆ ನುಗ್ಗಿ ಪ್ರತಿಭಟನೆ ನಡೆಸಿದರೆ, ಹಿಜಾಬ್ ಧರಿಸಿದ ವಿದ್ಯಾರ್ಥಿನಿಯರನ್ನ ಗೇಟ್ ಮುಂದೆ ತಡೆಯಲಾಗಿತ್ತು.
ಇದನ್ನು ವಿರೋಧಿಸಿ ಮುಖಂಡರು ಹಾಗೂ ಪೊಲೀಸರ ಮಧ್ಯೆ ಮಾತಿನ ಚಕಮಕಿ ನಡೆಯಿತು. ಹಿಜಾಬ್ ಧರಿಸಿದ ವಿದ್ಯಾರ್ಥಿಗಳು ರಸ್ತೆ ತಡೆದು ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಕಲ್ಲು ತೂರಾಟ ಮಾಡಿದ್ದರಿಂದ ಪೊಲೀಸರು ಲಾಠಿ ಚಾರ್ಜ್ ಮಾಡಿ ಗುಂಪನ್ನು ಚದುರಿಸಿದರು.