ಬಾಗಲಕೋಟೆ:ಡಾ.ಬಿ.ಆರ್.ಅಂಬೇಡ್ಕರ್ ಇತಿಹಾಸವನ್ನು ಅಳಿಸಿ ಹಾಕಲು ಶಿಕ್ಷಣ ಸಚಿವರು ಹೊರಟಿದ್ದಾರೆಂದು ಆರೋಪಿಸಿರುವ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು, ಅವರನ್ನು ಪಕ್ಷದಿಂದ ಹೊರಹಾಕುವಂತೆ ಪ್ರತಿಭಟನೆ ನಡೆಸಿದರು.
ಅಂಬೇಡ್ಕರ್ ಸುತ್ತೋಲೆ ವಿವಾದ: ಸಚಿವ ಸುರೇಶ್ ಕುಮಾರ್ ವಿರುದ್ಧ ದಸಂಸ ಪ್ರತಿಭಟನೆ - ಸಚಿವ ಸುರೇಶ್ ಕುಮಾರ್ ವಿರುದ್ಧ ಪ್ರತಿಭಟನೆ ಲೆಟೆಸ್ಟ್ ನ್ಯೂಸ್
ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ಜಿಲ್ಲೆಯ ಜಮಖಂಡಿ ಪಟ್ಟಣದಲ್ಲಿಬಿಜೆಪಿ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ವಿರುದ್ದ ಪ್ರತಿಭಟನೆ ನಡೆಸಿದರು.
![ಅಂಬೇಡ್ಕರ್ ಸುತ್ತೋಲೆ ವಿವಾದ: ಸಚಿವ ಸುರೇಶ್ ಕುಮಾರ್ ವಿರುದ್ಧ ದಸಂಸ ಪ್ರತಿಭಟನೆ](https://etvbharatimages.akamaized.net/etvbharat/prod-images/768-512-5138345-thumbnail-3x2-bandejpg.jpg)
ಇಂದು ಜಿಲ್ಲೆಯ ಜಮಖಂಡಿ ಪಟ್ಟಣದ ದೇಸಾಯಿ ವೃತ್ತದ ಬಳಿ ಜಮಾಹಿಸಿದ ಕಾರ್ಯಕರ್ತರು ಸಚಿವರ ವಿರುದ್ಧ ಪ್ರತಿಭಟನೆ ನಡೆಸಿದರು. ಪ್ರತಿಭಟನೆ ಬಳಿಕ ಸಮಿತಿಯ ರಾಜ್ಯ ಸಂಚಾಲಕರಾದ ರಾಜು ಮೇಲಿನಕೇರಿ, ರವಿ ಬಲೇಶ್ವರ ಮಾತನಾಡಿ, ಅಂಬೇಡ್ಕರ್ ಒಬ್ಬರೆ ಸಂವಿಧಾನ ರಚಿಸಿಲ್ಲ ಎಂಬ ವಿವಾದಾತ್ಮಕ ಹೇಳಿಕೆ ಸಿಎಂಸಿಎ ಸಂಸ್ಥೆಯು ಬರೆದಿರುವುದರಿಂದ ರಾಜ್ಯಾದ್ಯಂತ ಆಕ್ರೋಶಕ್ಕೆ ಕಾರಣವಾಗಿದೆ. ಈ ಮೂಲಕ ಬಿಜೆಪಿ ಸರ್ಕಾರ ಹಾಗೂ ಶಿಕ್ಷಣ ಸಚಿವ ಸುರೇಶ್ ಕುಮಾರ್ಡಾ.ಬಿ.ಆರ್.ಅಂಬೇಡ್ಕರ್ ಇತಿಹಾಸವನ್ನು ಅಳಿಸಲು ಮುಂದಾಗಿದ್ದಾರೆ. ಇಂತಹವರನ್ನು ಸಚಿವ ಸ್ಥಾನದಿಂದ ಕೈ ಬಿಡಬೇಕು ಎಂದು ಒತ್ತಾಯಿಸಿದರು.
ಇದೇ ಸಂದರ್ಭದಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆ ಹಾಕುತ್ತ ಸಚಿವರ ಪ್ರತಿಕೃತ ದಹನ ಮಾಡಿ ತಮ್ಮ ವಿವಿಧ ಬೇಡಿಕೆ ಇರುವ ಮನವಿ ಪತ್ರವನ್ನು ತಹಶಿಲ್ದಾರರ ಮೂಲಕ ರಾಜ್ಯಪಾಲರಿಗೆ ಸಲ್ಲಿಸಿದರು.