ಬಾಗಲಕೋಟೆ:ಕೂಡಲಸಂಗಮದಲ್ಲಿನ ಬಸವಣ್ಣ ಅವರ ಐಕ್ಯ ಮಂಟಪ ಶಿಥಿಲಾವಸ್ಥೆಗೆ ಬಂದಿದ್ದು, ಮುಂಜಾಗ್ರತಾ ಕ್ರಮವಾಗಿ ಐಕ್ಯ ಮಂಟಪ ಪ್ರವೇಶಕ್ಕೆ ತಾತ್ಕಾಲಿಕವಾಗಿ ನಿಷೇಧ ಹೇರಲಾಗಿದೆ.
ಕೂಡಲಸಂಗಮ ಐಕ್ಯ ಮಂಟಪ ಗೋಡೆ ಬಿರುಕು: ಭಕ್ತರ ಪ್ರವೇಶಕ್ಕೆ ನಿರ್ಬಂಧ - undefined
ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರದ ಮುಖ್ಯ ಎಂಜಿನಿಯರ್ ವರದಿ ನೀಡಿದ್ದಾರೆ. ಈ ವರದಿ ಆಧಾರದಲ್ಲಿ ದುರಸ್ತಿ ಕಾರ್ಯ ಪೂರ್ಣಗೊಳ್ಳುವವರೆಗೂ ಪ್ರವಾಸಿಗರ ಪ್ರವೇಶಕ್ಕೆ ತಾತ್ಕಲಿಕವಾಗಿ ನಿಷೇಧ ಹೇರಲಾಗಿದೆ ಎಂದು ಸ್ಪಷ್ಟನೆ ನೀಡಿ ಕೂಡಲಸಂಗಮ ಅಭಿವೃದ್ಧಿ ಮಂಡಳಿ ವಿಶೇಷ ಅಧಿಕಾರಿ ಪಿ.ಎ.ಮೇಘಣ್ಣವರ ಆದೇಶ ಹೊರಡಿಸಿದ್ದಾರೆ.
ಬಸವಣ್ಣ ಅವರ ಐಕ್ಯಮಂಟಪ ಬಾವಿಯಲ್ಲಿ ಬಿರುಕು ಬಿಟ್ಟ ಕುರಿತು ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರದ ಮುಖ್ಯ ಎಂಜಿನಿಯರ್ ವರದಿ ನೀಡಿದ್ದಾರೆ. ಈ ವರದಿ ಆಧಾರಿಸಿ ದುರಸ್ತಿ ಕಾರ್ಯ ಪೂರ್ಣಗೊಳ್ಳುವವರೆಗೂ ಭೇಟಿ ನೀಡುವ ಪ್ರವಾಸಿಗರ ಪ್ರವೇಶಕ್ಕೆ ತಾತ್ಕಲಿಕವಾಗಿ ನಿಷೇಧ ಹೇರಲಾಗಿದೆ ಎಂದು ಸ್ಪಷ್ಟನೆ ನೀಡಿ ಕೂಡಲಸಂಗಮ ಅಭಿವೃದ್ಧಿ ಮಂಡಳಿ ವಿಶೇಷ ಅಧಿಕಾರಿ ಪಿ.ಎ. ಮೇಘಣ್ಣವರ ಆದೇಶ ಹೊರಡಿಸಿದ್ದಾರೆ.
ಕೃಷ್ಣಾ ಮತ್ತು ಮಲಪ್ರಭಾ ನದಿಗಳ ಸಂಗಮ ಸ್ಥಳದಲ್ಲಿ ಬಸವಣ್ಣನ ಐಕ್ಯ ಮಂಟಪ ನಿರ್ಮಿಸಲಾಗಿದೆ. ಜೆ.ಹೆಚ್.ಪಟೇಲ್ ಅವರ ಸರ್ಕಾರ ಇದ್ದಾಗ ಕೂಡಲಸಂಗಮ ಅಭಿವೃದ್ಧಿಗೆ 34 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗಿತ್ತು.
ಕೂಡಲಸಂಗಮ ಅಭಿವೃದ್ಧಿ ಮಂಡಳಿ ವಿಶೇಷ ಅಧಿಕಾರಿ ಆಗಿದ್ದ ಶಿವಾನಂದ ಜಾಮದಾರ ಐಕ್ಯ ಮಂಟಪದಲ್ಲಿ ಸೇತುವೆ ನಿರ್ಮಾಣ ಹಾಗೂ ಆಧುನೀಕರಣಕ್ಕೆ ಹೆಚ್ಚಿನ ಆದ್ಯತೆ ನೀಡಿದ್ದರು. ಕೆಲವು ವರ್ಷಗಳಿಂದ ಐಕ್ಯ ಮಂಟಪ ನಿರ್ವಹಣೆಯಲ್ಲಿ ಪ್ರಾಧಿಕಾರ ನಿರ್ಲಕ್ಷ್ಯ ಧೋರಣೆ ತಳೆಯಲಾಗುತ್ತಿದೆ ಎಂಬ ಆರೋಪ ಕೇಳಿಬರುತ್ತಿದೆ. ಇದರ ಬೆನ್ನಲ್ಲೇ ಐಕ್ಯ ಮಂಟಪದಲ್ಲಿ ನೀರು ಬಸಿದು ಬಾವಿಯ ಗೋಡೆಯಲ್ಲಿ ಬಿರುಕು ಕಾಣಿಸಿಕೊಂಡಿದೆ. ಶೀಘ್ರವೇ ದುರಸ್ತಿಗೆ ಮುಂದಾಗಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.