ಕರ್ನಾಟಕ

karnataka

ETV Bharat / state

ಬಾಗಲಕೋಟೆಯಲ್ಲಿ 154 ಜನ ಗುಣಮುಖ, 123 ಹೊಸ ಪ್ರಕರಣಗಳು ದೃಢ - ಬಾಗಲಕೋಟೆಯಲ್ಲಿ ಕೊರೊನಾ ಪ್ರಕರಣ ಏರಿಕೆ ಲೇಟೆಸ್ಟ್​ ನ್ಯೂಸ್​

ಬಾಗಲಕೋಟೆ ಜಿಲ್ಲೆಯಲ್ಲಿ ಇಂದು ಒಟ್ಟು 123 ಹೊಸ ಸೋಂಕಿತ ಪ್ರಕರಣಗಳು ದೃಢಪಟ್ಟಿದ್ದು, ಇಬ್ಬರು ಸೋಂಕಿತರು ಮೃತಪಟ್ಟಿದ್ದಾರೆ. ಒಟ್ಟು 154 ಜನ ಗುಣಮುಖರಾಗಿ ಡಿಸ್ಚಾರ್ಜ್​ ಆಗಿದ್ದಾರೆ.

new kovid cases from Bagalkot
ಕೊರೊನಾ ಪ್ರಕರಣ ಏರಿಕೆ

By

Published : Sep 22, 2020, 12:38 AM IST

ಬಾಗಲಕೋಟೆ:ಹೊಸದಾಗಿ123 ಕೊರೊನಾ ಪ್ರಕರಣಗಳು ಹಾಗೂ ಎರಡು ಮೃತ ಪ್ರಕರಣಗಳು ದೃಢಪಟ್ಟಿವೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ತಿಳಿಸಿದ್ದಾರೆ.

ಜಿಲ್ಲೆಯಲ್ಲಿಂದು 154 ಜನ ಕೋವಿಡ್‍ನಿಂದ ಗುಣಮುಖರಾಗಿ ನಿಗಧಿತ ಆಸ್ಪತ್ರೆ ಮತ್ತು ಸಿಸಿಸಿ(ಕೊರೊನಾ ಕೇರ್​​ ಸೆಂಟರ್​ ) ಕೇಂದ್ರಗಳಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 9352 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಈ ಪೈಕಿ ಒಟ್ಟು 8045 ಜನ ಕೋವಿಡ್‍ನಿಂದ ಗುಣಮುಖರಾಗಿದ್ದಾರೆ.

ಹೊಸದಾಗಿ ಸೋಂಕು ಪತ್ತೆಯಾದವರಲ್ಲಿ ಬಾಗಲಕೋಟೆ ತಾಲೂಕಿನಲ್ಲಿ 33, ಬಾದಾಮಿ 12, ಹುನಗುಂದ 22, ಬೀಳಗಿ 6, ಮುಧೋಳ 23, ಜಮಖಂಡಿ 27 ಜನ ಸೇರಿದ್ದಾರೆ. ಅವರನ್ನು ನಿಗಧಿತ ಆಸ್ಪತ್ರೆ ಮತ್ತು ಸಿಸಿಸಿ ಕೇಂದ್ರಗಳಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಜಿಲ್ಲೆಯಿಂದ ಇದುವರೆಗೆ ಒಟ್ಟು 88604 ಸ್ಯಾಂಪಲ್‍ಗಳನ್ನು ಕೊರೊನಾ ಪರೀಕ್ಷೆಗೆ ಕಳುಹಿಸಲಾಗಿದೆ. ಈ ಪೈಕಿ 76981 ನೆಗೆಟಿವ್ ಪ್ರಕರಣ, 9352 ಪಾಸಿಟಿವ್ ಪ್ರಕರಣ ಹಾಗೂ 100 ಮೃತ ಪ್ರಕರಣ ವರದಿಯಾಗಿರುತ್ತದೆ. ಇನ್ನು 1207 ಮಾತ್ರ ಸಕ್ರಿಯ ಪ್ರಕರಣಗಳು ಇವೆ. ಇಲ್ಲಿವರೆಗೆ ಒಟ್ಟು 409 ಸ್ಯಾಂಪಲ್‍ಗಳು ಮಾತ್ರ ರಿಜೆಕ್ಟ್​ ಆಗಿರುತ್ತವೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ABOUT THE AUTHOR

...view details