ಬಾಗಲಕೋಟೆ:ಕೃಷ್ಣ ನದಿಗೆ ಅಪಾರ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದ್ದು,ಜಮಖಂಡಿ ತಾಲೂಕಿನ ಕೆಲ ಗ್ರಾಮಗಳಲ್ಲಿ ಪ್ರವಾಹ ಭೀತಿ ಉಂಟಾದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಆರ್.ರಾಮಚಂದ್ರನ್, ಸಿಇಒ ಗಂಗೂಬಾಯಿ ಮಾನಕರ್, ಎಸ್ಪಿ ಲೋಕೇಶ ಜಗಲಸಾರ ಸೇರಿದಂತೆ ಇತರ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕೃಷ್ಣ ನದಿಗೆ ಅಪಾರ ಪ್ರಮಾಣದ ನೀರು.. ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ
ಕೃಷ್ಣ ನದಿಗೆ ಅಪಾರ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದ್ದು, ಜಮಖಂಡಿ ತಾಲೂಕಿನ ಕೆಲ ಗ್ರಾಮಗಳಲ್ಲಿ ಪ್ರವಾಹ ಭೀತಿ ಉಂಟಾದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಆರ್.ರಾಮಚಂದ್ರನ್, ಸಿಇಒ ಗಂಗೂಬಾಯಿ ಮಾನಕರ್, ಎಸ್ ಪಿ.ಲೋಕೇಶ ಜಗಲಸಾರ ಸೇರಿದಂತೆ ಇತರ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮುತ್ತೂರು ಗಡ್ಡೆಯು ಸಂಪೂರ್ಣ ಜಲಾವೃತಗೊಂಡಿದ್ದು, ಈ ಸ್ಥಳಕ್ಕೆ ಬೋಟ್ ಮೂಲಕ ತೆರಳಿದ ಜಿಲ್ಲಾಧಿಕಾರಿ ನೇತೃತ್ವದ ತಂಡ,ರೈತರೊಡನೆ ಚರ್ಚೆ ನಡೆಸಿ ಸಮಸ್ಯೆಯನ್ನು ಆಲಿಸಿದರು. ಈ ಸಂದರ್ಭದಲ್ಲಿ ರೈತರೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿ, ಕೃಷ್ಣಾ ನದಿಗೆ ನೀರು ಹರಿದು ಬರುತ್ತಿದ್ದು, ಸೂಕ್ತ ಸ್ಥಳಕ್ಕೆ ಕುಟುಂಬ ಸಮೇತ ಜಾನುವಾರುಗಳನ್ನು ಸ್ಥಳಾಂತರ ಮಾಡುವುದಾಗಿ ತಿಳಿಸಿದ್ರು. ಇದನ್ನ ನೀವು ನಿರಾಕರಿಸಿದ್ರೇ, ಒತ್ತಾಯ ಪೂರ್ವಕವಾಗಿ ಬೋಟ್ ಮೂಲಕ ಸ್ಥಳಾಂತರ ಮಾಡಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ನಿಮ್ಮ ಜಾನುವಾರುಗಳು ಲಕ್ಷಾಂತರ ರೂಪಾಯಿಗಳ ಮೌಲ್ಯ ಇರುತ್ತದೆ. ಪ್ರವಾಹದಿಂದ ತೊಂದರೆ ಉಂಟಾದರೆ, ಜಿಲ್ಲಾಡಳಿತದಿಂದ ಕೇವಲ 30 ಸಾವಿರ ರೂ. ಮಾತ್ರ ಪರಿಹಾರ ಧನ ನೀಡಲಾಗುತ್ತದೆ. ನಿಮ್ಮ ಅನುಕೂಲಕ್ಕಾಗಿ ಎಲ್ಲಾ ವ್ಯವಸ್ಥೆ ಮಾಡಲಾಗಿದೆ. ಅದನ್ನು ಸರಿಯಾಗಿ ಬಳಕೆ ಮಾಡಿಕೊಳ್ಳಬೇಕು ಎಂದರು.