ಕರ್ನಾಟಕ

karnataka

ETV Bharat / state

ಬಾಗಲಕೋಟೆ: ಬಿಜೆಪಿ ಬೆಂಬಲಿತ ಎಪಿಎಂಸಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ - ಬಾಗಲಕೋಟೆ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ

ಬಾಗಲಕೋಟೆ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷರಾಗಿ ಕೃಷ್ಣಪ್ಪ ಲಮಾಣಿ ಆಯ್ಕೆಯಾಗಿದ್ದಾರೆ.

APMC election
APMC election

By

Published : Jun 15, 2020, 8:41 PM IST

ಬಾಗಲಕೋಟೆ:ಬಾಗಲಕೋಟೆ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಸೋಮವಾರ ಜಯಭೇರಿ ಬಾರಿಸಿದ್ದಾರೆ.

ಎಪಿಎಂಸಿ ಅಧ್ಯಕ್ಷರಾಗಿ ಕೃಷ್ಣಪ್ಪ ಲಮಾಣಿ ಚುನಾವಣೆಯಲ್ಲಿ ಆಯ್ಕೆಯಾದರೆ, ಉಪಾಧ್ಯಕ್ಷರಾಗಿ ಶಿವಮ್ಮ ಮೇಟಿ ಅವಿರೋಧವಾಗಿ ಆಯ್ಕೆಯಾದರು. ಎಪಿಎಂಸಿ ಅಧ್ಯಕ್ಷರಾಗಿ ಆಯ್ಕೆಯಾದ ಕೃಷ್ಣಪ್ಪ ಲಮಾಣಿ,ಉಪಾಧ್ಯಕ್ಷೆ ಶಿವಮ್ಮ ಮೇಟಿಯವರನ್ನು ಶಾಸಕ ವೀರಣ್ಣ ಚರಂತಿಮಠವರು ಅಭಿನಂದಿಸಿ ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಗ್ರಾಮೀಣ ಘಟಕದ ಅಧ್ಯಕ್ಷ ಸುರೇಶ ಕೊಣ್ಣೂರ, ತಾ.ಪಂ.ಸದಸ್ಯ ಪರಶುರಾಮ ಛಬ್ಬಿ,ಎಪಿಎಂಸಿ ಮಾಜಿ ಅಧ್ಯಕ್ಷ ಪ್ರಭುಸ್ವಾಮಿ ಸರಗಣಾಚಾರಿ,ಸಿದ್ದಪ್ಪ ಹೂಗಾರ, ಸಿ.ಎಂ.ಮೇಟಿ,ಸಂಗಯ್ಯ ಸರಗಣಾಚಾರಿ ಮುಂತಾದವರು ಉಪಸ್ಥಿತರಿದ್ದರು.

ABOUT THE AUTHOR

...view details