ಕರ್ನಾಟಕ

karnataka

ETV Bharat / state

ಪಿಡಿಒಗಳಿಗೆ ಖಡಕ್​ ಎಚ್ಚರಿಕೆ ನೀಡಿದ ಸಚಿವ ಕೆ.ಎಸ್.ಈಶ್ವರಪ್ಪ - Bagalkot latest news

ಕೆಲ ಪಿಡಿಒಗಳು ಗ್ರಾಮಕ್ಕೆ ಹೋಗದೆ, ಕಚೇರಿಗೆ ಭೇಟಿ ನೀಡದೆ ನಿರ್ಲಕ್ಷ್ಯ ವಹಿಸುತ್ತಿದ್ದಾರೆ. ಅಂತವರ ವಿರುದ್ಧ ದೂರುಗಳು ಕೇಳಿ ಬಂದರೆ ಸೂಕ್ತ ಕ್ರಮ ಕೈಗೊಳ್ಳುತ್ತೇನೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಎಚ್ಚರಿಕೆ ನೀಡಿದರು.

ಕೆ.ಎಸ್.ಈಶ್ವರಪ್ಪ
KS Eshwarappa

By

Published : Oct 9, 2021, 10:35 AM IST

ಬಾಗಲಕೋಟೆ: ಗ್ರಾಮ ಪಂಚಾಯತ್ ಅಧ್ಯಕ್ಷರು ಮತ್ತು ಉಪಾಧ್ಯಕ್ಷರನ್ನು ತಾತ್ಸಾರ ಮಾಡಿದರೆ ಪಿಡಿಒ ಹಾಗೂ ಎಇಒ ಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಎಚ್ಚರಿಕೆ ನೀಡಿದರು.

ನವನಗರದ ಕಲಾಭವನದಲ್ಲಿ ಹಮ್ಮಿಕೊಂಡಿದ್ದ ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಪಿಡಿಒಗಳಿಗೆ ಸರ್ಕಾರದ ಯೋಜನೆಗಳನ್ನು ಸದುಪಯೋಗ ಪಡಿಸಿಕೊಳ್ಳುವ ಕುರಿತು ನಡೆದ ಒಂದು ದಿನದ ಕಾರ್ಯಾಗಾರ ಸಮಾರಂಭದಲ್ಲಿ ಅವರು ಮಾತನಾಡಿದರು. ಕೆಲವು ಪಿಡಿಒಗಳು ಗ್ರಾಮಕ್ಕೆ ಹೋಗದೆ, ಕಚೇರಿಗೆ ಭೇಟಿ ನೀಡದೆ ನಿರ್ಲಕ್ಷ್ಯ ವಹಿಸುತ್ತಿದ್ದಾರೆ. ಅಂತವರ ವಿರುದ್ಧ ದೂರುಗಳು ಕೇಳಿ ಬಂದರೆ ಸೂಕ್ತ ಕ್ರಮ ಕೈಗೊಳ್ಳುತ್ತೇನೆ ಎಂದರು.

ಕಾರ್ಯಾಗಾರ ಸಮಾರಂಭದಲ್ಲಿ ಮಾತನಾಡಿದ ಕೆ.ಎಸ್.ಈಶ್ವರಪ್ಪ

ಸ್ವಚ್ಛ ಭಾರತ್​ ಅಡಿಯಲ್ಲಿ ಬಯಲು ಮುಕ್ತ ಶೌಚಾಲಯ ಮಾಡುವಲ್ಲಿ ಯಶಸ್ಸು ಕಂಡಿದೆ ಎಂದು ಹೇಳಲಾಗುತ್ತದೆ. ಆದರೆ ಇದನ್ನು ನಾವು ಒಪ್ಪುವುದಿಲ್ಲ. ಗ್ರಾಮೀಣ ಭಾಗ ಇನ್ನೂ ಬಯಲು ಶೌಚಾಲಯ ಮುಕ್ತವಾಗಿಲ್ಲ. ಈ ಕುರಿತು ಅಧಿಕಾರಿಗಳು, ಜನಪ್ರತಿನಿಧಿಗಳು ಹೆಚ್ಚು ಗಮನ ನೀಡಬೇಕಾಗಿದೆ. ಜೊತೆಗೆ ಗ್ರಾಮದಲ್ಲಿ ಕೆರೆ ಅಭಿವೃದ್ಧಿ ಮಾಡುವ ಜೊತೆಗೆ ದೇವಾಲಯದ ಪಕ್ಕದಲ್ಲಿರುವ ಕಲ್ಯಾಣಿಗಳನ್ನು ಅಭಿವೃದ್ಧಿ ಪಡಿಸಬೇಕು ಎಂದು ಸೂಚಿಸಿದರು.

ABOUT THE AUTHOR

...view details