ಬಾಗಲಕೋಟೆ:ಲಾಕ್ಡೌನ್ ಉಲ್ಲಂಘಿಸಿ ಗ್ರಾಮದಲ್ಲಿ ಬೇಕಾಬಿಟ್ಟಿ ಸಂಚರಿಸಿ, ಬುದ್ಧಿ ಹೇಳಿದ ಪೊಲೀಸರ ಜೊತೆ ವಾಗ್ವಾದ ಮಾಡಿ, ಕರ್ತವ್ಯ ನಿರತ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ಘಟನೆ ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲೂಕಿನ ಮುತ್ತಲಗೇರಿ ಗ್ರಾಮದಲ್ಲಿ ನಡೆದಿದೆ.
ಪೊಲೀಸರ ಸಮವಸ್ತ್ರ ಹಿಡಿದು ಎಳೆದಾಡಿ, ಲಾಠಿ ಕಸಿದು ಪೊಲೀಸರ ಮೇಳೆ ಹಲ್ಲೆಗೆ ಮುಂದಾಗಿದ್ದಾರೆ. ಮುತ್ತಲಗೇರಿ ಗ್ರಾಮದ ಒಂದು ಕುಟುಂಬಸ್ಥರಿಂದ ಪೊಲೀಸರ ಜೊತೆ ಅನುಚಿತ ವರ್ತನೆ ನಡೆದಿದೆ.