ಬಾಗಲಕೋಟೆ: ರೈತರು ಬೆಳೆದ ಬೆಳೆ ಹಾನಿ ಆಗಬಾರದು ಹಾಗೂ ಉಪವಾಸದಿಂದ ಯಾರೂ ಇರಬಾರದು ಎಂಬ ದೃಷ್ಟಿಯಿಂದ ಜಮಖಂಡಿ ಕ್ಷೇತ್ರದ ಶಾಸಕ ಆನಂದ ನ್ಯಾಮಗೌಡ ರೈತರು ಬೆಳೆದ ತರಕಾರಿಯನ್ನು ನೇರವಾಗಿ ಖರೀದಿ ಮಾಡಿ ನೆರವಾಗಿದ್ದಾರೆ.
ಲಾಕ್ಡೌನ್ ಎಫೆಕ್ಟ್: ರೈತರಿಂದ ತರಕಾರಿ ಖರೀದಿಸಿ ಬಡವರಿಗೆ ಹಂಚಿದ ಜಮಖಂಡಿ ಶಾಸಕ
ರೈತರು ಬೆಳೆದ ಬೆಳೆ ಹಾನಿ ಆಗಬಾರದು ಹಾಗೂ ಉಪವಾಸದಿಂದ ಯಾರೂ ಇರಬಾರದು ಎಂಬ ದೃಷ್ಟಿಯಿಂದ ಜಮಖಂಡಿ ಕ್ಷೇತ್ರದ ಶಾಸಕ ಆನಂದ ನ್ಯಾಮಗೌಡ ರೈತರು ಬೆಳೆದ ತರಕಾರಿ ಖರೀದಿ ಮಾಡಿದ್ದಾರೆ.
ಜಮಖಂಡಿ ಮತಕ್ಷೇತ್ರದ ರೈತರ ಸಮಸ್ಯೆಗಳನ್ನು ವಿಚಾರಿಸಿ ಅವರ ಸಂಕಷ್ಟಗಳನ್ನು ಆಲಿಸಿ ನಂತರ ರೈತರು ಬೆಳೆದ ಸೊಪ್ಪು, ತರಕಾರಿಗಳನ್ನು ಖರೀದಿಸಿದರು. ಈ ಸಮಸ್ಯೆಯನ್ನು ಸರ್ಕಾರದ ಗಮನಕ್ಕೆ ತರುತ್ತೇನೆ ಎಂದು ರೈತರಿಗೆ ಭರವಸೆ ನೀಡಿದರು.
ರೈತರು ಬೆಳೆದ ಬೆಳೆಗಳು ಮಾರುಕಟ್ಟೆಯಲ್ಲಿ ಮಾರಟವಾಗುತ್ತಿಲ್ಲ. ಇಂತಹ ಸಂದರ್ಭದಲ್ಲಿ ಬೆಳೆಗಳನ್ನು ರೈತರಿಂದ ನೇರವಾಗಿ ಖರೀದಿ ಮಾಡಿ ಜಮಖಂಡಿಯ ಬಡಜನರಿಗೆ ಮತ್ತು ಪ್ರತಿಯೊಂದು ಮನೆಗೆ ಉಚಿತವಾಗಿ ಕೊಡುವ ಯೋಜನೆಯನ್ನು ಹಮ್ಮಿಕೊಂಡಿದ್ದಾರೆ. ಈ ಯೋಜನೆ ರೈತರಿಗೆ ಹಾಗೂ ಬಡವರಿಗೆ ಅನುಕೂಲವಾಗುತ್ತದೆ ಎಂದು ಶಾಸಕ ಆನಂದ ನ್ಯಾಮಗೌಡ ತಿಳಿಸಿದ್ದಾರೆ.