ಬಾಗಲಕೋಟೆ: ಜಿಲ್ಲೆಯ ಮಹಾಲಿಂಗಪುರ ಪುರಸಭೆ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆ ಸಮಯದಲ್ಲಿ, ಕಾಂಗ್ರೆಸ್ - ಬಿಜೆಪಿ ಕಾರ್ಯಕರ್ತರ ಮಧ್ಯೆ ವಾಗ್ವಾದ ನಡೆದು, ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿದ ಘಟನೆ ನಡೆದಿದೆ.
ಮಹಾಲಿಂಗಪುರ ಪುರಸಭೆ ಅಧ್ಯಕ್ಷ ಉಪಾಧ್ಯಕ್ಷ ಎಲೆಕ್ಷನ್ನಲ್ಲಿ ಹೈಡ್ರಾಮಾ - ಮಹಾಲಿಂಗಪುರ ಪುರಸಭೆ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆಯಲ್ಲಿ ಹೈಡ್ರಾಮಾ
ಮಹಾಲಿಂಗಪುರ ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷ ಆಯ್ಕೆ ಚುನಾವಣೆಯಲ್ಲಿ ಹೈಡ್ರಾಮಾ ನಡೆದು, ಕೆಲ ಸಮಯ ಗೊಂದಲಮಯ ವಾತಾವರಣ ನಿರ್ಮಾಣವಾಗಿತ್ತು.
ಮಹಾಲಿಂಗಪುರ ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷ ಆಯ್ಕೆ ಚುನಾವಣೆಯಲ್ಲಿ ಹೈಡ್ರಾಮಾ ನಡೆದು, ಕೆಲ ಸಮಯ ಗೊಂದಲಮಯ ವಾತಾವರಣ ನಿರ್ಮಾಣವಾಗಿತ್ತು. ಈ ಸಂಧರ್ಭದಲ್ಲಿ, ಪರಿಸ್ಥಿತಿ ತಿಳಿಗೊಳಿಸಲು ಪೊಲೀಸರು, ಲಘು ಲಾಠಿ ಪ್ರಹಾರ ನಡೆಸಿದರು.
ಬಿಜೆಪಿ 3 ಮಹಿಳಾ ಸದಸ್ಯರನ್ನು, ಬಿಜೆಪಿ - ಕಾಂಗ್ರೆಸ್ ಕಾರ್ಯಕರ್ತರು ಎಳೆದಾಡಿರುವ ಘಟನೆ ಸಹ ಜರುಗಿದೆ. ಬಿಜೆಪಿಯಿಂದ ಗೆದ್ದು ಕಾಂಗ್ರೆಸ್ ಬೆಂಬಲಿಸಲು ಮುಂದಾದ ಬಿಜೆಪಿ ಸದಸ್ಯರಾದ ಸವಿತಾ ಹುರಕಡ್ಲಿ, ಗೋದಾವರಿ ಬಾಟ್, ಚಾಂದಿನಿ ನಾಯಕ್, ಅವರನ್ನು ಬಿಜೆಪಿ ಕಾರ್ಯಕರ್ತರು ಎಳೆದೊಯ್ದರು. ಒಬ್ಬ ಬಿಜೆಪಿ ಸದಸ್ಯೆ ಗೈರಾಗಿದ್ದು, ಮತಗಳು ಸಮ ಬಲವಾದ ಕಾರಣ ಚೀಟಿ ಎತ್ತುವ ಮೂಲಕ ಬಿಜೆಪಿ ಅಭ್ಯರ್ಥಿ ಸ್ನೇಹಲ್ ಅಂಗಡಿ ಅಧ್ಯಕ್ಷೆಯಾಗಿ, ಉಪಾಧ್ಯಕ್ಷೆಯಾಗಿ ಗೋದಾವರಿ ಬಾಟ್ ಆಯ್ಕೆಯಾಗಿದ್ದಾರೆ.