ಬಾಗಲಕೋಟೆ:ಕ್ರಿಕೆಟ್ ಬೆಟ್ಟಿಂಗ್ಗಾಗಿ ಲಕ್ಷಾಂತರ ರೂಪಾಯಿ ಸಾಲ ಮಾಡಿದ್ದ ವ್ಯಕ್ತಿ ಸಾಲ ತೀರಿಸಲಾಗದೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಕಲಾದಗಿ ಗ್ರಾಮದಲ್ಲಿ ನಡೆದಿದೆ.
ಕಲಾದಗಿಯಿಂದ ಕಾತರಕಿ ಗ್ರಾಮಕ್ಕೆ ಹೋಗುವ ಮಾರ್ಗ ಮಧ್ಯದಲ್ಲಿರುವ ಘಟಪ್ರಭಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸೈಯದ್ ವಾಳದ್ (34) ಮೃತ ವ್ಯಕ್ತಿ. ಅಗ್ನಿಶಾಮಕ ಸಿಬ್ಬಂದಿ ನದಿಯಿಂದ ಮೃತದೇಹವನ್ನ ಹೊರತೆಗೆದಿದ್ದಾರೆ.