ಬಾಗಲಕೋಟೆ:ಮಾಸ್ಕ್ ದಿನಾಚರಣೆ ಅಂಗವಾಗಿ ಜಿಲ್ಲಾಡಳಿತದಿಂದ ಕಾಲ್ನಡಿಗೆ ಜಾಗೃತಿ ಜಾಥಾಗೆ ಹಸಿರು ನಿಶಾನೆ ತೋರುವ ಮೂಲಕ ಜಿಲ್ಲಾಧಿಕಾರಿ ಕ್ಯಾಪ್ಟನ್ ರಾಜೇಂದ್ರ, ಸಿಇಒ ಗಂಗೂಬಾಯಿ ಮಾನಕರ ಚಾಲನೆ ನೀಡಿದರು.
ಮಾಸ್ಕ್ ಡೇ: ಬಾಗಲಕೋಟೆಯಲ್ಲಿ ಜಾಗೃತಿ ಜಾಥಾಗೆ ಜಿಲ್ಲಾಧಿಕಾರಿ ಚಾಲನೆ - ಜನಜಾಗೃತಿ ಅಭಿಯಾನಕ್ಕೆ ಜಿಲ್ಲಾಧಿಕಾರಿ ಚಾಲನೆ ಸುದ್ದಿ
ಕಾಲ್ನಡಿಗೆ ಜಾಥಾದಲ್ಲಿ ಅಧಿಕಾರಿ ಹಾಗೂ ಸಿಬ್ಬಂದಿ ವರ್ಗ ಭಾಗಿಯಾಗಿ ಕೋವಿಡ್-19ನಿಂದ ದೂರವಿರಲು ಮಾಸ್ಕ್ ಬಳಕೆ, ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಯಿತು.
ಜನಜಾಗೃತಿ ಅಭಿಯಾನಕ್ಕೆ ಜಿಲ್ಲಾಧಿಕಾರಿ ಚಾಲನೆ
ಕಾಲ್ನಡಿಗೆ ಜಾಥಾದಲ್ಲಿ ಅಧಿಕಾರಿ ಹಾಗೂ ಸಿಬ್ಬಂದಿ ವರ್ಗ ಭಾಗಿಯಾಗಿ ಕೋವಿಡ್-19ನಿಂದ ದೂರವಿರಲು ಮಾಸ್ಕ್ ಬಳಕೆ, ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಯಿತು.
ಜಾಥಾದಲ್ಲಿ ಜಾಗೃತಿ ಫಲಕಗಳ ಪ್ರದರ್ಶನ ಮಾಡಿ, ಜನತೆಗೆ ಕಡ್ಡಾಯವಾಗಿ ಮಾಸ್ಕ್ ಬಳಸುವಂತೆ ಜಾಗೃತಿ ಮೂಡಿಸಲಾಯಿತು. ಜಿ.ಪಂ ಉಪ ಕಾರ್ಯದರ್ಶಿ ಎ.ಜಿ.ತೋಟದ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎ.ಎನ್.ದೇಸಾಯಿ, ಆರ್.ಸಿ.ಹೆಚ್. ಅಧಿಕಾರಿ ಡಾ. ಬಿ.ಜಿ.ಹುಬ್ಬಳ್ಳಿ, ಜಿಲ್ಲಾ ಸಮೀಕ್ಷಣಾಧಿಕಾರಿ ಡಾ. ವಿಜಯ ಕಂಠಿ ಸೇರಿದಂತೆ ಇತರರು ಪಾಲ್ಗೊಂಡಿದ್ದರು.