ಕರ್ನಾಟಕ

karnataka

ETV Bharat / state

ಬಾಗಲಕೋಟೆಯಲ್ಲಿ ಎಂಬಿಬಿಎಸ್ ವಿದ್ಯಾರ್ಥಿನಿ ಆತ್ಮಹತ್ಯೆ - ಬಾಗಲಕೋಟೆಯಲ್ಲಿ ಮೆಡಿಕಲ್​ ವಿದ್ಯಾರ್ಥಿನಿ ಆತ್ಮಹತ್ಯೆ

ಬಾಗಲಕೋಟೆಯಲ್ಲಿ ನೇಣು ಬಿಗಿದುಕೊಂಡು ಎಂಬಿಬಿಎಸ್ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈಕೆ ಮಾನಸಿಕ ಖಿನ್ನತೆಗೆ ಒಳಗಾಗಿದ್ದಳು ಎನ್ನಲಾಗುತ್ತಿದೆ.

ಪಾಲಕರು ಬೆಂಗಳೂರಿಗೆ ತೆರಳಿದ್ದಾಗ ಎಂಬಿಬಿಎಸ್ ವಿದ್ಯಾರ್ಥಿನಿ ಆತ್ಮಹತ್ಯೆ
MBBS Student committed suicide at Bagalkot

By

Published : Feb 21, 2021, 1:30 PM IST

ಬಾಗಲಕೋಟೆ: ನೇಣು ಬಿಗಿದುಕೊಂಡು ಎಂಬಿಬಿಎಸ್ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದಲ್ಲಿ ‌ನಡೆದಿದೆ.

ಸಿಂದೂರಿಕಾ (24) ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿನಿ. ಈಕೆ ಮೆಡಿಕಲ್​ ಕಾಲೇಜಿನಲ್ಲಿ ಅಂತಿಮ ವರ್ಷದ ಎಂಬಿಬಿಎಸ್ ಓದುತ್ತಿದ್ದಳು.

ನಗರದ ಕುಮಾರೇಶ್ವರ ಆಸ್ಪತ್ರೆ ಬಳಿ ಬಾಡಿಗೆ ಮನೆಯಲ್ಲಿ ಪಾಲಕರೊಂದಿಗೆ ಸಿಂದೂರಿಕಾ ವಾಸವಾಗಿದ್ದಳು. ಪೋಷಕರು ಬೆಂಗಳೂರಿಗೆ ತೆರಳಿದ್ದ ವೇಳೆ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಿಳಿದುಬಂದಿದೆ.

ಓದಿ: ಕೊಡಗಿನಲ್ಲಿ ಹುಲಿ ದಾಳಿಗೆ ಕಾರ್ಮಿಕ ಮಹಿಳೆ ಬಲಿ

ವಿದ್ಯಾರ್ಥಿನಿ ಮಾನಸಿಕ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಈ ಸಂಬಂಧ ಬಾಗಲಕೋಟೆ ನವನಗರದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details