ಬಾಗಲಕೋಟೆ: ಜಿಲ್ಲೆಯಲ್ಲಿ ಕೃಷ್ಣಾ ನದಿ ಪ್ರವಾಹಕ್ಕೆ 30 ಗ್ರಾಮ, ಘಟಪ್ರಭಾ ನದಿಯ 21 ಗ್ರಾಮಗಳು ಪ್ರವಾಹಕ್ಕೆ ನಲುಗಿವೆ. ಜಿಲ್ಲೆಯಲ್ಲಿ ಒಟ್ಟು 50 ಗ್ರಾಮಗಳು ಸಂಪೂರ್ಣ ಪ್ರವಾಹಕ್ಕೆ ಸಿಲುಕಿವೆ ಎಂದು ಉಸ್ತುವಾರಿ ಕಾರ್ಯದರ್ಶಿ ಶಿವಯೋಗಿ ಕಳಸದ ತಿಳಿಸಿದ್ದಾರೆ.
ಬಾಗಲಕೋಟೆ ಜಿಲ್ಲಾಡಳಿತ ಭವನದಲ್ಲಿ, ಪ್ರವಾಹ ಪೀಡಿತ ಪ್ರದೇಶಗಳಲ್ಲಿ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅವರು ಮಾತನಾಡಿದ್ರು. ಜಿಲ್ಲೆಯಲ್ಲಿ 96 ಮನೆಗಳು ಅತಿವೃಷ್ಟಿಯಿಂದ ಹಾನಿಗೊಳಗಾಗಿವೆ. ಜಿಲ್ಲೆಯಲ್ಲಿ ಪ್ರವಾಹ ಬಾಧಿತ ಸ್ಥಳದಿಂದ 9,760 ಕುಟುಂಬಗಳನ್ನು ಸ್ಥಳಾಂತರಿಸಲಾಗಿದೆ. 34,959 ಜಾನುವಾರುಗಳನ್ನು ಸ್ಥಳಾಂತರ ಮಾಡಲಾಗಿದೆ.