ಕರ್ನಾಟಕ

karnataka

ETV Bharat / state

ಪಕ್ಷದ ಮುಖಂಡರು ಒಪ್ಪಿದರೆ ಬಾದಾಮಿ ಕ್ಷೇತ್ರದಿಂದ ಸ್ಪರ್ಧೆ: ಸಚಿವ ಶ್ರೀರಾಮುಲು - ಚಾಮುಂಡೇಶ್ವರಿ, ಬಾದಾಮಿ ಆಯಿತು ಈಗ ಬೇರೆ ಕ್ಷೇತ್ರ

ಗೋ ಹತ್ಯೆ ನಿಷೇಧ ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿ ಮತ್ತು ನಮ್ಮ ಸರ್ಕಾರದಿಂದ ತೀರ್ಮಾನ ತೆಗೆದುಕೊಂಡಿದ್ದೇವೆ. ಆದರೆ ಕೆಲವು ಕಾಂಗ್ರೆಸ್ ನಾಯಕರು ಗೋ ಹತ್ಯೆ ನಿಷೇಧವನ್ನು ವಿರೋಧಿಸುತ್ತಿದ್ದಾರೆ ಎಂದು ಶ್ರೀರಾಮುಲು ಹೇಳಿದರು.

minister-b-sri-ramulu-talk-about-badami-election
ಸಚಿವ ಶ್ರೀರಾಮಲು

By

Published : Dec 24, 2020, 10:30 PM IST

ಬಾಗಲಕೋಟೆ: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಪಕ್ಷದ ಮುಖಂಡರು ಒಪ್ಪಿದರೆ ಬಾದಾಮಿ ಮತ ಕ್ಷೇತ್ರದಿಂದ ಸ್ಪರ್ಧೆ ಮಾಡುವುದಾಗಿ ಸಮಾಜ ಕಲ್ಯಾಣ ಸಚಿವ ಬಿ.ಶ್ರೀರಾಮುಲು ತಿಳಿಸಿದ್ದಾರೆ.

ಸಚಿವ ಶ್ರೀರಾಮುಲು

ಜಿಲ್ಲೆಯ ಗುಳೇದಗುಡ್ಡ ಪಟ್ಟಣದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಟೂರಿಸ್ಟ್ ಇದ್ದಂತೆ. ಒಂದೇ ಕ್ಷೇತ್ರದಲ್ಲಿ ನಿಲ್ಲುವರಲ್ಲ ಎಂದು‌ ಲೇವಡಿ ಮಾಡಿದ‌ರು. ಸಿದ್ದರಾಮಯ್ಯನವರು ಸಿಎಂ ಆಗಿದ್ದಾಗಲೇ ಅಸ್ತಿತ್ವ ಉಳಿಸಿಕೊಳ್ಳಲಿಲ್ಲ. ಚಾಮುಂಡೇಶ್ವರಿ, ಬಾದಾಮಿ ಆಯಿತು, ಈಗ ಬೇರೆ ಕ್ಷೇತ್ರ ಹುಡುಕುತ್ತಿದ್ದಾರೆ ಎಂದರು.

ಓದಿ: ಗನ್​​ ಪರವಾನಗಿ: ಬೇಕಾದ ಅರ್ಹತೆ ಏನು, ಬಂದೂಕಿನ ಬೆಲೆ ಎಷ್ಟು ಗೊತ್ತಾ?

ಗೋ ಹತ್ಯೆ ನಿಷೇಧ ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿ ಮತ್ತು ನಮ್ಮ ಸರ್ಕಾರದಿಂದ ತೀರ್ಮಾನ ತೆಗೆದುಕೊಂಡಿದ್ದೇವೆ. ಆದರೆ ಕಾಂಗ್ರೆಸ್​ನ ಕೆಲವು ನಾಯಕರು ಗೋ ಹತ್ಯೆ ನಿಷೇಧವನ್ನು ವಿರೋಧಿಸುತ್ತಿದ್ದಾರೆ. ಅಲ್ಲದೆ ಮಾಜಿ ಸಿಎಂ ಸಿದ್ದರಾಮಯ್ಯ ಕೊಡಗಿನ ಜನತೆ ಕೂಡ ಗೋ ಮಾಂಸ ತಿನ್ನುತ್ತಾರೆ ಎಂದು ಹೇಳಿಕೆ ನೀಡುವ ಮೂಲಕ ಗೊಂದಲ ಉಂಟು ಮಾಡಿದ್ದಾರೆ. ಅದೇ ರೀತಿ ಕೊಡಗಿನ ಜನತೆಯಲ್ಲಿ ಸಿದ್ದರಾಮಯ್ಯನವರು ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು.

ABOUT THE AUTHOR

...view details