ಬಾಗಲಕೋಟೆ: ಇಡೀ ರಾಜ್ಯದಲ್ಲಿ ಯಾವ ಸಮುದಾಯಕ್ಕೆ ಎಸ್ಟಿ ಮೀಸಲಾತಿ ಅವಶ್ಯವಿದೆಯೋ, ಅಂತಹ ಸಮುದಾಯವನ್ನು ಎಸ್ಟಿ ಮೀಸಲಾತಿಗೆ ಸೇರಬೇಕು ಎಂದು ಪಂಚಾಯತ್ ರಾಜ್ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ತಿಳಿಸಿದ್ದಾರೆ.
'ಶೇ.80ರಷ್ಟು ಮಂದಿ ಬಡತನ ರೇಖೆಗಿಂತ ಕೆಳಗೆ ಇರುವ ಸಮುದಾಯವನ್ನು ಎಸ್ಟಿಗೆ ಸೇರಿಸಿ' - ಸಚಿವ ಕೆ.ಎಸ್. ಈಶ್ವರಪ್ಪ ಸುದ್ದಿ
ಸಮುದಾಯವೊಂದರಲ್ಲಿ ಶೇಕಡಾ 80ರಷ್ಟು ಮಂದಿ ಬಡತನ ರೇಖೆಗಿಂತ ಕಡಿಮೆಯಿದ್ದರೇ, ಅಂತಹ ಸಮುದಾಯವನ್ನು ಪರಿಶಿಷ್ಟ ಪಂಗಡದ ಮೀಸಲಾತಿಗೆ ಸೇರಿಸಬೇಕು ಎಂದು ಸಚಿವ ಕೆ.ಎಸ್. ಈಶ್ವರಪ್ಪ ಆಗ್ರಹಿಸಿದ್ದಾರೆ.
ಕೆ.ಎಸ್. ಈಶ್ವರಪ್ಪ
ನಗರದ ನೂತನ ಪ್ರವಾಸ ಮಂದಿರದಲ್ಲಿ ಮಾತನಾಡಿದ ಅವರು ಕೇವಲ ಕುರುಬ ಸಮಾಜವನ್ನು ಮಾತ್ರ ಎಸ್ಟಿ ಮೀಸಲಾತಿ ಸೇರಿಸುವುದಲ್ಲ. ಯಾವ ಸಮುದಾಯದಲ್ಲಿ ಶೇಕಡಾ 80ರಷ್ಟು ಮಂದಿ ಬಡತನ ರೇಖೆಗಿಂತ ಕೆಳಗೆ ಇರುತ್ತಾರೋ ಅಂತಹ ಸಮುದಾಯವನ್ನು ಎಸ್ಟಿ ಮೀಸಲಾತಿಗೆ ಸೇರಿಸಬೇಕು ಎಂದು ಒತ್ತಾಯಿಸುತ್ತೇವೆ ಎಂದರು.
ಜೊತೆಗೆ ಈ ಕುರಿತು ಶೀಘ್ರವಾಗಿ ನಮ್ಮ ಮುಖಂಡರು ತೀರ್ಮಾನ ತೆಗೆದುಕೊಳ್ಳುತ್ತಾರೆ. ರಾಜಕೀಯದಲ್ಲಿ ಕುರುಬರ ಸಮುದಾಯಕ್ಕೆ ಪ್ರಾಶಸ್ತ್ಯ ಸಿಗಬೇಕು ಎಂದು ಈಶ್ವರಪ್ಪ ಆಗ್ರಹಿಸಿದರು.