ಬಾಗಲಕೋಟೆ:ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹುಟ್ಟುಹಬ್ಬದ ಅಂಗವಾಗಿ ಸಿದ್ದರಾಮೋತ್ಸವ ಆಚರಿಸುತ್ತಿರುವುದು ಅವರ ವೈಯಕ್ತಿಕ ಮತ್ತು ಕಾಂಗ್ರೆಸ್ ಪಕ್ಷಕ್ಕೆ ಸೇರಿರುವ ವಿಚಾರವಾಗಿದೆ. ಅದಕ್ಕೂ ನಮಗೂ ಸಂಬಂಧವಿಲ್ಲ. ಅವರು ವಿಜಯೋತ್ಸವ ಮಾಡ್ತಾರೋ, ಇನ್ನೊಂದು ಮಾಡ್ತಾರೋ ಮಾಡಲಿ. ಆದರೆ, ಮುಂಬರುವ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಗಳಿಸಲಿದೆ ಎಂದು ಕೈಗಾರಿಕೆ ಸಚಿವರಾದ ಮುರಗೇಶ ನಿರಾಣಿ ತಿಳಿಸಿದ್ದಾರೆ.
ಸಚಿವ ಮುರುಗೇಶ ನಿರಾಣಿ ಪ್ರತಿಕ್ರಿಯೆ ನಗರದಲ್ಲಿ ಮಾಧ್ಯಮ ಪತ್ರಿನಿಧಿಗಳೊಂದಿಗೆ ಮಾತನಾಡಿದ ಅವರು, ಸಂಘ ಪರಿವಾರ ಮತ್ತು ಬಿಎಸ್ವೈ ಮಾಗ೯ದಶ೯ನದಲ್ಲಿ ಬೊಮ್ಮಾಯಿ ಸಕಾ೯ರ ಒಳ್ಳೆಯ ಕೆಲಸ ಮಾಡುತ್ತಿದೆ. 2023ರ ಚುನಾವಣೆವರೆಗೂ ಬೊಮ್ಮಾಯಿ ಅವರೇ ಸಿಎಂ ಆಗಿರ್ತಾರೆ. ಸಿಎಂ ಬೊಮ್ಮಾಯಿ ಮತ್ತು ನಮ್ಮೆಲ್ಲರ ಸಾಮೂಹಿಕ ನೇತೃತ್ವದಲ್ಲಿ ಚುನಾವಣೆಗೆ ಸಿದ್ಧರಾಗಿದ್ದೇವೆ. 125ಕ್ಕೂ ಅಧಿಕ ಸ್ಥಾನ ಪಡೆದು ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದರು.
ಇದೇ ಸಮಯದಲ್ಲಿ ಕೆರೂರು ಗಲಭೆ ಪ್ರಕರಣ ವಿಚಾರವಾಗಿ ಮಾತನಾಡಿ, ಉದ್ದೇಶಪೂರ್ವಕವಾಗಿ ನಮ್ಮ ಹಿಂದೂ ಸಂಘಟನೆಯ ವ್ಯಕ್ತಿಗಳ ಮೇಲೆ ಹಲ್ಲೆಯಾಗಿದೆ.
ಇದು ಆಗಬಾರದಿತ್ತು. ಈ ಘಟನೆಯನ್ನ ನಾವು ಖಂಡಿಸುತ್ತೇವೆ. ಈಗಾಗಲೇ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದೇವೆ. ಮುಂಬರುವ ದಿನಗಳಲ್ಲಿ ಈ ರೀತಿ ಘಟನೆ ಮರುಕಳಿಸದಂತೆ ಕ್ರಮ ವಹಿಸಲು ಸ್ಪಷ್ಟ ಸೂಚನೆ ನೀಡಿದ್ದೇವೆ ಎಂದು ಸಚಿವ ಮುರುಗೇಶ ನಿರಾಣಿ ಹೇಳಿದರು.
ಪ್ರಕರಣಕ್ಕೆ ಪೊಲೀಸರ ವೈಫಲ್ಯ ಕಾರಣ ಎನ್ನುವ ವಿಚಾರವಾಗಿ ಮಾತನಾಡಿ, ಅದರ ಬಗ್ಗೆ ತನಿಖೆ ನಡೆದಿದೆ. ನಾನು ಪೊಲೀಸ್ ಅಧಿಕಾರಿಗಳ ಜೊತೆ ಮಾತನಾಡಿದ್ದೇನೆ. ಘಟನೆ ನಡೆಯುವ ಸಮಯದಲ್ಲಿ ನಾಲ್ಕೈದು ಜನ ಪೊಲೀಸರು ಸ್ಥಳದಲ್ಲಿದ್ರೂ ಅನ್ನೋ ಮಾಹಿತಿ ಗಮನಕ್ಕೆ ಬಂದಿದೆ. ಅಲ್ಲಿ ಯಾರು ಇದ್ರು ಅನ್ನೋದರ ಮಾಹಿತಿ ಪಡೆದು ಹಿರಿಯ ಅಧಿಕಾರಿಗಳು ವಿಚಾರಣೆ ಮಾಡುತ್ತಾರೆ. ಪೊಲೀಸರು ಕೂಡಾ ತಪ್ಪು ಎಸಗಿರೋದು ಸಾಬೀತಾದ್ರೆ ಖಂಡಿತವಾಗಿ ಕ್ರಮ ತೆಗೆದುಕೊಳ್ಳುತ್ತೇವೆ. ಕಾನೂನಿನ ಮುಂದೆ ಯಾರೂ ದೊಡ್ಡವರಲ್ಲ. ಹಿಂದೂ-ಮುಸ್ಲಿಂ ಎಲ್ಲರಿಗೂ ಒಂದೇ ಕಾನೂನು. ಹಿಂದೂ ಯುವಕರ ಮೇಲೆ ನಡೆದ ಹಲ್ಲೆ ಉದ್ದೇಶ ಪೂರ್ವಕವಾಗಿ ನಡೆದಿದೆ. ಅದನ್ನು ಬಹಳ ಸ್ಪಷ್ಟವಾಗಿ ಹೇಳಬಹುದು ಎಂದರು.
ಓದಿ:ಎಲ್ಲರೊಂದಿಗೆ ಸಮನ್ವಯ ಸಾಧಿಸಿದಾಗ ಮಾತ್ರ ಸಮಾಜದಲ್ಲಿ ಸಮಾನತೆ ತರಲು ಸಾಧ್ಯ: ಸಿಎಂ ಬೊಮ್ಮಾಯಿ