ಬಾಗಲಕೋಟೆ :ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪನವರ ಅನುಭವ ಹಾಗೂ ಅದೃಷ್ಟದ ಮುಂದೆ ಯಾರೂ ಏನೂ ಮಾಡಲು ಆಗುವುದಿಲ್ಲ. ಕಾಂಗ್ರೆಸ್ ಪಕ್ಷ ಆಡಳಿತ ಇದ್ದಾಗ ಬರಗಾಲ, ಯಡಿಯೂರಪ್ಪನವರ ಆಡಳಿತದಲ್ಲಿ ಮಳೆ ಬರುತ್ತೆ ಎಂದು ವಸತಿ ಸಚಿವರಾದ ವಿ. ಸೋಮಣ್ಣ ತಿಳಿಸಿದ್ದಾರೆ.
ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಗುಲಗಾಲಜಂಬಗಿ ಗ್ರಾಮದಲ್ಲಿ ನೆರೆ ಪ್ರದೇಶಕ್ಕೆ ಭೇಟಿ ನೀಡಿ ವೀಕ್ಷಣೆ ಮಾಡಿದರು. ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಾ, ವಿಡಿಯೋ ವೈರಲ್ ಬಗ್ಗೆ ಪ್ರತಿಕ್ರಿಯೆ ನೀಡಿ, ಕಾಂಗ್ರೆಸ್ ಪಕ್ಷದ ವಿರುದ್ಧ ಹರಿಹಾಯ್ದು ಕೈಲಾಗದವರು ಮೈ ಪರಿಚಿಕೊಂಡತೆ ಎಂಬಂತಾಗಿದೆ ಕಾಂಗ್ರೆಸ್ ಪಕ್ಷದವರ ಸ್ಥಿತಿ ಎಂದರು.