ಬಾಗಲಕೋಟೆ:ಕಾಮಗಾರಿ ವಿಚಾರವಾಗಿ ಕಾಂಗ್ರೆಸ್ ಶಾಸಕ ಆನಂದ ನ್ಯಾಮಗೌಡ ಅವರು ಪಿಎಸ್ಐ ಮೇಲೆ ಗರಂ ಆದ ಘಟನೆ ನಗರದಲ್ಲಿ ನಡೆದಿದೆ. ನಗರದ ಹೊರ ವಲಯದ ಮುಧೋಳ ರಸ್ತೆಯಲ್ಲಿ ವೃತ್ತ ನಿರ್ಮಾಣ ಸಂದರ್ಭದಲ್ಲಿ ಜಮಖಂಡಿ ಪಿಎಸ್ಐ ಹಾಗೂ ಜನರ ನಡುವೆ ಮಾತಿನ ಚಕಮಕಿ ನಡೆಯಿತು. ಈ ಸಂದರ್ಭದಲ್ಲಿ ಮಧ್ಯಪ್ರವೇಶಿಸಿದ ಶಾಸಕರು ಎಸ್ಐ ಮೇಲೆ ಗರಂ ಆಗಿದ್ದಾರೆ.
ಈ ಬಗ್ಗೆ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಮತ್ತೊಂದೆಡೆ ಈ ಘಟನೆ ಬಗ್ಗೆ ವಿಡಿಯೋದೊಂದಿಗೆ ರಾಜ್ಯ ಬಿಜೆಪಿ ಟ್ವೀಟ್ ಮಾಡಿದ್ದು, ಶಾಸಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದೆ.