ಕರ್ನಾಟಕ

karnataka

ETV Bharat / state

ಉಪ ವಿದ್ಯುತ್ ವಿತರಣಾ ಕೇಂದ್ರಗಳಿಗೆ ಶಾಸಕ ಚರಂತಿಮಠ ಭೇಟಿ; ಅಧಿಕಾರಿಗಳಿಗೆ ತರಾಟೆ

ನವನಗರದ ಯೂನಿಟ್-2ರಲ್ಲಿ ನಿರ್ಮಾಣಗೊಳ್ಳುತ್ತಿರುವ ಎರಡು ಉಪ ವಿದ್ಯುತ್ ವಿತರಣಾ ಕೇಂದ್ರದ ಕಾಮಗಾರಿಯು ಮಂದಗತಿಯಲ್ಲಿ ಸಾಗುತ್ತಿರುವುದನ್ನು ಕಂಡು ಶಾಸಕ ವೀರಣ್ಣ ಚರಂತಿಮಠ ಸಂಬಂಧಪಟ್ಟ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

MLA Veeranna Charanthimath visits Navanagar's electricity distribution centers.
ನವನಗರ ಉಪವಿದ್ಯುತ್ ವಿತರಣಾ ಕೇಂದ್ರಗಳಿಗೆ ಶಾಸಕ ಚರಂತಿಮಠ ಭೇಟಿ..ಅಧಿಕಾರಿಗಳಿಗೆ ತರಾಟೆ

By

Published : Sep 14, 2020, 11:51 PM IST

ಬಾಗಲಕೋಟೆ:ನವನಗರದ ಯೂನಿಟ್-2 ನಿವಾಸಿಗಳಿಗಾಗಿ ಹೊಸದಾಗಿ ನಿರ್ಮಾಣಗೊಳ್ಳುತ್ತಿರುವ ಎರಡು ಉಪ ವಿದ್ಯುತ್ ವಿತರಣಾ ಕೇಂದ್ರಗಳಿಗೆ ಶಾಸಕ ವೀರಣ್ಣ ಚರಂತಿಮಠ ಭೇಟಿ ನೀಡಿ, ಕಾಮಗಾರಿ ಪರಿಶೀಲಿಸಿದರು.

ಉಪ ವಿದ್ಯುತ್ ವಿತರಣಾ ಕೇಂದ್ರಗಳಿಗೆ ಭೇಟಿ ನೀಡಿದ ಶಾಸಕ ವೀರಣ್ಣ ಚರಂತಿಮಠ

ಈ ವೇಳೆ ಕಾಮಗಾರಿ ಮಂದಗತಿಯಲ್ಲಿ ಸಾಗುತ್ತಿರುವುದನ್ನು ಕಂಡು ಸಂಬಂಧಪಟ್ಟ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಉಪ ವಿದ್ಯುತ್ ಸರಬರಾಜು ಕೇಂದ್ರವು 30 ಎಂವಿಎ ಸಾಮರ್ಥ್ಯ ಹೊಂದಿದ್ದು, ಇದು ಹೈಟೆಕ್ ಮಾದರಿಯಲ್ಲಿ ನಿರ್ಮಾಣವಾಗಿತ್ತು. ನಿಗದಿತ ಸಮಯಕ್ಕೆ ಕಾಮಗಾರಿ ಪೂರ್ಣಗೊಳ್ಳುತ್ತಿಲ್ಲ. ಇದರಿಂದ ಸಂತ್ರಸ್ತರು ಯೂನಿಟ್-2 ರಲ್ಲಿ ಮನೆ ನಿರ್ಮಿಸಿಕೊಳ್ಳಲು ಹಾಗೂ ವಾಣಿಜ್ಯ ಕಟ್ಟಡ ನಿರ್ಮಾಣ ಮಾಡಲು ಅಡೆತಡೆ ಉಂಟಾಗುತ್ತಿದೆ. ಇನ್ಮುಂದೆ ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ವಹಿಸಬಾರದು. ಮೂರು ತಿಂಗಳೊಳಗೆ ಕಾಮಗಾರಿ ಪೂರ್ಣಗೊಳಿಸಿ, ಲೋಕಾರ್ಪಣೆ ಮಾಡಬೇಕು ಎಂದು ಸೂಚಿಸಿದರು.

ABOUT THE AUTHOR

...view details