ಬಾಗಲಕೋಟೆ:ಉತ್ತರ ಕರ್ನಾಟಕದ ಪ್ರವಾಹ ಪೀಡಿತ ಸಂತ್ರಸ್ತರ ಅಭಿವೃದ್ಧಿಗಾಗಿ ಶಾಸಕ ವೀರಣ್ಣ ಚರಂತಿಮಠ ಅವರು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 2 ಕೋಟಿ ರೂಪಾಯಿ ಚೆಕ್ನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಹಸ್ತಾಂತರಿಸಿದರು.
ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 2 ಕೋಟಿ ರೂ. ಚೆಕ್ ನೀಡಿದ ಶಾಸಕ ವೀರಣ್ಣ ಚರಂತಿಮಠ - ಶಾಸಕ ವೀರಣ್ಣ ಚರಂತಿಮಠ
ಉತ್ತರ ಕರ್ನಾಟಕದಲ್ಲಿ ಉಂಟಾದ ಭೀಕರ ಪ್ರವಾಹದಿಂದ ತತ್ತರಿಸಿರುವ ಸಂತ್ರಸ್ತರಿಗಾಗಿ ಬಿ.ವಿ.ವಿ ಸಂಘ ಎರಡು ಕೋಟಿ ಪರಿಹಾರ ಧನ ನೀಡಿದೆ. ಇಂದು ಬೆಂಗಳೂರಿಗೆ ತೆರಳಿ ಶಾಸಕ ವೀರಣ್ಣ ಚರಂತಿಮಠ, ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರ ನೇತೃತ್ವದ ತಂಡ 2 ಕೋಟಿ ರೂ.ಗಳನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡಿದೆ.
MLA Veeranna Charantimath
ಪ್ರವಾಹ ಬಂದ ಸಮಯದಲ್ಲಿ ಸಿಎಂ ಯಡಿಯೂರಪ್ಪ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದರು. ಈ ವೇಳೆ ಬಿ.ವಿ.ವಿ ಸಂಘ ಎರಡು ಕೋಟಿ ಪರಿಹಾರ ಧನ ನೀಡುವುದಾಗಿ ತಿಳಿಸಿತ್ತು. ಅದರಂತೆ ಬೆಂಗಳೂರಿಗೆ ತೆರಳಿ ಶಾಸಕ ವೀರಣ್ಣ ಚರಂತಿಮಠ, ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರ ನೇತೃತ್ವದ ತಂಡ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಇಂದು ಚೆಕ್ ವಿತರಿಸಿದರು.
ಈ ಸಂದರ್ಭದಲ್ಲಿ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಸೇರಿದಂತೆ ಸಂಘದ ಸದಸ್ಯರು ಉಪಸ್ಥಿತರಿದ್ದರು.