ಕರ್ನಾಟಕ

karnataka

ETV Bharat / state

ಬಾಗಲಕೋಟೆ ಆತ್ಮಹತ್ಯೆ ಯತ್ನ ಪ್ರಕರಣ: ಅಮ್ಮ ಮೃತಪಟ್ಟ 2 ದಿನದ ಬಳಿಕ ಕಂದಮ್ಮಗಳು ಸಾವು - ಬಾಗಲಕೋಟೆ ಮಹಿಳೆ ಮಕ್ಕಳು ಆತ್ಮಹತ್ಯೆ

ಗಂಡನ ಕಿರುಕುಳಕ್ಕೆ ಬೇಸತ್ತ ಮಹಿಳೆಯು ತನ್ನ ಮೂವರು ಮಕ್ಕಳಿಗೆ ಬೆಂಕಿ ಹಚ್ಚಿ ತಾನೂ ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗಿದ್ದಳು. ಆಕೆ ಘಟನೆಯಲ್ಲಿ ಸಾವನ್ನಪ್ಪಿದ್ದರೆ, ಇಬ್ಬರು ಮಕ್ಕಳು ಘಟನೆ ನಡೆದ 2 ದಿನಗಳ ಬಳಿಕ ಕೊನೆಯುಸಿರೆಳೆದಿದ್ದಾರೆ.

suicide
ಆತ್ಮಹತ್ಯೆ

By

Published : Jul 12, 2021, 10:52 AM IST

ಬಾಗಲಕೋಟೆ:ಪತಿಯ ಕಿರುಕುಳ ತಾಳಲಾರದೆ ಪತ್ನಿಯು ತನ್ನ ಮೂವರು ಮಕ್ಕಳಿಗೆ ಬೆಂಕಿ ಹಚ್ಚಿ ತಾನೂ ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗಿದ್ದಳು. ತಕ್ಷಣವೇ ಅವರನ್ನು ವಿಜಯಪುರದ ಸಕಾ೯ರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಘಟನೆಯಲ್ಲಿ ತಾಯಿ ಸಾವನ್ನಪ್ಪಿದ್ದರೆ, ಇಬ್ಬರು ಮಕ್ಕಳು ಘಟನೆ ನಡೆದ 2 ದಿನಗಳ ಬಳಿಕ ಕೊನೆಯುಸಿರೆಳೆದಿದ್ದಾರೆ.

ಜಮಖಂಡಿ ತಾಲೂಕಿನ ಮಧುರಖಂಡಿ ಗ್ರಾಮದ ನಿವಾಸಿ ಬಿಸ್ಮಿಲ್ಲಾ (28) ಎಂಬ ಮಹಿಳೆ ಮನೆಯಲ್ಲೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ತಾಯಿ ಮೃತಪಟ್ಟಿದ್ದರೆ ಗಾಯಗೊಂಡ ಮಕ್ಕಳನ್ನು ವಿಜಯಪುರದ ಸಕಾ೯ರಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ನಿನ್ನೆ ತಡರಾತ್ರಿ ಚಿಕಿತ್ಸೆ ಫಲಿಸದೆ ಯಾಸೀದಾ(6) & ಸನಾ (4) ಎಂಬ ಇಬ್ಬರು ಹೆಣ್ಣುಮಕ್ಕಳು ಮೃತಪಟ್ಟಿದ್ದಾರೆ.

ಮೂರನೇಯ ಮಗ‌ ಸಮೀರ್ ಸಹ ಗಾಯಗೊಂಡು ವಿಜಯಪುರ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಸಂತಾನಹರಣ ಶಸ್ತ್ರ ಚಿಕಿತ್ಸೆ ವಿಚಾರದಲ್ಲಿ ಪತಿ-ಪತ್ನಿಯ ಮಧ್ಯೆ ಪ್ರತಿನಿತ್ಯ ಗಲಾಟೆ ನಡೆಯುತ್ತಿತ್ತು ಎನ್ನಲಾಗ್ತಿದೆ. ಪತ್ನಿಗೆ ಕಿರುಕುಳ ನೀಡಿರುವ ದಸ್ತಗೀರಸಾಬನನ್ನು ಪೊಲೀಸರು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ. ಜಮಖಂಡಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details