ಕರ್ನಾಟಕ

karnataka

ETV Bharat / state

ಇಬ್ಬರು ಮಕ್ಕಳೊಂದಿಗೆ ಕೃಷಿ ಹೊಂಡಕ್ಕೆ ಹಾರಿ ತಾಯಿ ಆತ್ಮಹತ್ಯೆ - ಬಾದಾಮಿ ತಾಲೂಕಿನ ಹಲಕುರ್ಕಿ ಗ್ರಾಮ

ಇಬ್ಬರು ಮಕ್ಕಳೊಂದಿಗೆ ಕೃಷಿ ಹೊಂಡಕ್ಕೆ ಹಾರಿ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಾದಾಮಿ ತಾಲೂಕಿನ ಹಲಕುರ್ಕಿ ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆಗೆ ಕೌಟುಂಬಿಕ ಕಲಹವೇ ಕಾರಣ ಎಂದು ಶಂಕಿಸಲಾಗಿದೆ.

Mother Commit Suicide with Her Two Childrens
ಇಬ್ಬರು ಮಕ್ಕಳೊಂದಿಗೆ ಕೃಷಿ ಹೊಂಡಕ್ಕೆ ಹಾರಿ ತಾಯಿ ಆತ್ಮಹತ್ಯೆ

By

Published : Mar 23, 2021, 2:49 PM IST

ಬಾಗಲಕೋಟೆ:ಇಬ್ಬರು ಮಕ್ಕಳೊಂದಿಗೆ ಕೃಷಿ ಹೊಂಡಕ್ಕೆ ಹಾರಿ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಜಿಲ್ಲೆಯ ಬಾದಾಮಿ ತಾಲೂಕಿನ ಹಲಕುರ್ಕಿ ಗ್ರಾಮದಲ್ಲಿ ನಡೆದಿದೆ.

ತಾಯಿ ಫಕೀರವ್ವ ನೀಲನ್ನವರ (32), ಮಕ್ಕಳಾದ ನೀಲಕಂಠ (12), ಕಲ್ಪನಾ(10) ಮೃತರು. ಮಕ್ಕಳ ಜೊತೆ ದೇವಸ್ಥಾನಕ್ಕೆ ಹೋಗಿ ಬರುವುದಾಗಿ ಹೇಳಿ ಮನೆಯಿಂದ ಹೊರ ಹೋಗಿದ್ದ ಫಕೀರವ್ವ, ಖಾಸಗಿ ವ್ಯಕ್ತಿಯೊಬ್ಬರ ಜಮೀನಿನಲ್ಲಿದ್ದ ಕೃಷಿ ಹೊಂಡಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮರಣೋತ್ತರ ಪರೀಕ್ಷೆಗಾಗಿ ಶವಗಳನ್ನು ಬಾದಾಮಿ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಸ್ಥಳಕ್ಕಾಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದು, ಆತ್ಮಹತ್ಯೆಗೆ ಕೌಟುಂಬಿಕ ಕಲಹವೇ ಕಾರಣ ಎಂದು ಶಂಕಿಸಲಾಗಿದೆ.

ಓದಿ:2ನೇ ಮದುವೆ ಮಾಡಿಸಲಿಲ್ಲವೆಂದು ತಮ್ಮನಿಗೆ ಚಾಕುವಿನಿಂದ ಇರಿದ ಅಣ್ಣ!

ABOUT THE AUTHOR

...view details