ಕರ್ನಾಟಕ

karnataka

ETV Bharat / state

ಪಕ್ಷದ ರಾಜ್ಯಾಧ್ಯಕ್ಷನಾಗಿ ನನ್ನ ಗುರಿ ಲೋಕಸಭಾ ಚುನಾವಣೆ: ಬಿ ವೈ ವಿಜಯೇಂದ್ರ - ಬಿಜೆಪಿ ರಾಜ್ಯಾಧ್ಯಕ್ಷ

ಪಕ್ಷದ ಎಲ್ಲ ಹಿರಿಯರನ್ನು ವಿಶ್ವಾಸಕ್ಕೆ ತೆಗೆದುಕೊಂಡಿದ್ದೇನೆ. ಒಬ್ಬಿಬ್ಬರಲ್ಲಿ ಯಾವುದೇ ಅಸಮಾಧಾನ ಇದ್ದರೆ ಕರೆದು ಮಾತನಾಡಿ ಸಮಸ್ಯೆ ಬಗೆಹರಿಸುವಂತೆ ಪಕ್ಷದ ಪರಿಷ್ಠರಿಗೆ ಕೇಳಿಕೊಂಡಿದ್ದೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿದರು.

Etv Bharatmy-goal-is-loksabha-elections-says-b-y-vijayendra
ಪಕ್ಷದ ರಾಜ್ಯಾಧ್ಯಕ್ಷನಾಗಿ ನನ್ನ ಗುರಿ ಲೋಕಸಭಾ ಚುನಾವಣೆ: ಬಿ ವೈ ವಿಜಯೇಂದ್ರ

By ETV Bharat Karnataka Team

Published : Dec 31, 2023, 3:41 PM IST

Updated : Dec 31, 2023, 3:51 PM IST

ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಪ್ರತಿಕ್ರಿಯೆ

ಬಾಗಲಕೋಟೆ: "ಪಕ್ಷ ವಿರೋಧಿ ಹೇಳಿಕೆ ನೀಡುವವರ ಮೇಲೆ ಕ್ರಮ ತೆಗೆದುಕೊಳ್ಳಬೇಕು ಎಂಬುದಾಗಿ ಬಿಜೆಪಿ ಕಾರ್ಯಕಾರಣಿಯಲ್ಲಿ ಅಭಿಪ್ರಾಯ ವ್ಯಕ್ತವಾಗಿರುವುದು ನಿಜ. ಎಲ್ಲ ಹಿರಿಯರನ್ನು ವಿಶ್ವಾಸಕ್ಕೆ ತೆಗೆದುಕೊಂಡಿದ್ದೇನೆ. ಒಬ್ಬಿಬ್ಬರಲ್ಲಿ ಯಾವುದೇ ಅಸಮಾಧಾನ ಇದ್ದರೆ ಕರೆದು ಮಾತನಾಡಿ ಸಮಸ್ಯೆ ಬಗೆಹರಿಸುವಂತೆ ಪಕ್ಷದ ಪರಿಷ್ಠರಿಗೆ ಕೇಳಿಕೊಂಡಿದ್ದೇನೆ. ಯಾರ ವಿರುದ್ಧವೂ ಕ್ರಮ ಕೈಗೊಳ್ಳಬೇಕೆಂಬ ವ್ಯಕ್ತಿ ವಿಜಯೇಂದ್ರ ಅಲ್ಲ ಎಂದು" ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿದರು.

ಬಾಗಲಕೋಟೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ಪಕ್ಷದ ರಾಜ್ಯಾಧ್ಯಕ್ಷನಾಗಿ ನನ್ನ ಗುರಿ ಲೋಕಸಭಾ ಚುನಾವಣೆ. ಪ್ರಧಾನಿ ನರೇಂದ್ರ ಮೋದಿಯವರು ತಪಸ್ಸಿನ ರೀತಿಯಲ್ಲಿ ದೇಶದ ಅಭಿವೃದ್ಧಿಯನ್ನು ಮಾಡುತ್ತಿದ್ದಾರೆ. ಎಲ್ಲ ಸಮಾಜಗಳಿಗೆ ಕಾರ್ಯಕ್ರಮ ಕೊಟ್ಟಿದ್ದಾರೆ. ಮೋದಿಯವರ ಅಭಿವೃದ್ಧಿ ತಪಸ್ಸಿಗೆ ಎಲ್ಲರೂ ಕೈ ಜೋಡಿಸಬೇಕು. ಈಗಾಗಲೇ ಎಲ್ಲರೂ ಕೈ ಜೋಡಿಸಿದ್ದಾರೆ. ಉಳಿದವರೂ ಕೈ ಜೋಡಿಸುತ್ತಾರೆ ಎಂಬ ವಿಶ್ವಾಸ ಇದೆ" ಎಂದರು.

500ಕ್ಕೂ ಹೆಚ್ಚು ರೈತರು ಆತ್ಮಹತ್ಯೆ:"ಕರ್ನಾಟಕದಲ್ಲಿ ಹೊಸ ಸರ್ಕಾರ ಬಂದು 7 ತಿಂಗಳು ಕಳೆದಿದೆ. ಈ ಅವಧಿಯಲ್ಲಿ ಸರ್ಕಾರ ಯಾವ ದಿಕ್ಕಿನಲ್ಲಿ ಸಾಗುತ್ತಿದೆ ಅಂತ ಸ್ಪಷ್ಟವಾಗಿದೆ. ರಾಜ್ಯದಲ್ಲಿ ಭೀಕರ ಬರ ಇದೆ. 500ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬರಕ್ಕೂ ಸರ್ಕಾರಕ್ಕೂ ಸಂಬಂಧ ಇಲ್ಲ ಅನ್ನೋ ರೀತಿ ವರ್ತಿಸುತ್ತಿದೆ. ಸುವರ್ಣ ಸೌಧ ಮೂಲಕ ಉತ್ತರ ಕರ್ನಾಟಕದ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕು ಎನ್ನುವ ಕನಸು ಬಿ ಎಸ್ ಯಡಿಯೂರಪ್ಪ ಅವರಿಗೆ ಇತ್ತು. ಆದರೆ, ಸರ್ಕಾರ ಯಾವುದೇ ಗಂಭೀರ ಚರ್ಚೆಯನ್ನು ನಡೆಸಲಿಲ್ಲ. ಜಿಲ್ಲಾ ಉಸ್ತುವಾರಿ ಸಚಿವರು ಏನು ಮಾಡುತ್ತಿದ್ದಾರೆ ಅನ್ನೋದು ಯಾರಿಗೂ ಗೊತ್ತಾಗುತ್ತಿಲ್ಲ. ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ಕೆಲಸವನ್ನು ಮಾಡುತ್ತಾರೆ ಅಂದುಕೊಂಡಿದ್ದೆವು. ಆದರೆ ಅದು ಆಗಲಿಲ್ಲ" ಎಂದು ಹೇಳಿದರು.

"ಇದು ರೈತ ವಿರೋಧಿ, ಬಡವರ ವಿರೋಧಿ, ಅಭಿವೃದ್ಧಿ ವಿರೋಧಿ ಸರ್ಕಾರ. ಕಾಂಗ್ರೆಸ್ ಪಕ್ಷದ ಶಾಸಕರು ತಲೆ ಎತ್ತಿಕೊಂಡು ಓಡಾಡುವ ಪರಿಸ್ಥಿತಿ ಇಲ್ಲ. ಒಂದೇ ಒಂದು ರೂಪಾಯಿ ಅನುದಾನ ನೀಡಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಲ್ಪಸಂಖ್ಯಾತರಿಗೆ 10 ಸಾವಿರ ಕೋಟಿ ರೂಪಾಯಿ ಕೊಡುತ್ತೇನೆ ಅಂತ ಹೇಳುತ್ತಾರೆ. ನಾವು ಅದನ್ನು ವಿರೋಧ ಮಾಡುತ್ತೇವೆ ಎಂದಲ್ಲ. ಆದರೆ, ನಿಮ್ಮ ಆದ್ಯತೆಗಳೇನು? ರೈತರು, ಬಡವರು, ಅಭಿವೃದ್ಧಿ ಕೆಲಸಗಳಿಗೆ ಆದ್ಯತೆ ಇಲ್ಲವೇ?" ಎಂದು ಪ್ರಶ್ನಿಸಿದರು.

"ಇನ್ನು ಅತಿ ಶೀಘ್ರದಲ್ಲೇ ಜಿಲ್ಲೆಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯುತ್ತದೆ" ಎಂದು ವಿಜಯೇಂದ್ರ ತಿಳಿಸಿದರು.

ಇದನ್ನೂ ಓದಿ:'ನನ್ನ ತಟ್ಟೆ ಕ್ಲೀನ್ ಇದೆ, ಮೊದಲು ಬಿಜೆಪಿಯವರು ತಮ್ಮ ತಟ್ಟೆ ನೋಡಿಕೊಳ್ಳಲಿ'

Last Updated : Dec 31, 2023, 3:51 PM IST

ABOUT THE AUTHOR

...view details