ಕರ್ನಾಟಕ

karnataka

ETV Bharat / state

ಬಾಗಲಕೋಟೆ ಜಿಲ್ಲೆಯಲ್ಲಿ ಹೊಸದಾಗಿ 136 ಕೊರೊನಾ ಪ್ರಕರಣ ಪತ್ತೆ... - Bagalkot

ಬಾಗಲಕೋಟೆ ಜಿಲ್ಲೆಯಲ್ಲಿ ಹೊಸದಾಗಿ 136 ಕೊರೊನಾ ಪ್ರಕರಣಗಳು ಹಾಗೂ 2 ಮರಣ ಪ್ರಕರಣಗಳು ಮಂಗಳವಾರ ದೃಢಪಟ್ಟಿದೆ.

Bagalkot
ಬಾಗಲಕೋಟೆ

By

Published : Sep 1, 2020, 8:15 PM IST

ಬಾಗಲಕೋಟೆ: ಜಿಲ್ಲೆಯಲ್ಲಿ 81 ಜನ ಕೋವಿಡ್‍ನಿಂದ ಗುಣಮುಖರಾಗಿ ನಿಗದಿತ ಆಸ್ಪತ್ರೆ ಮತ್ತು ಸಿಸಿಸಿ ಕೇಂದ್ರಗಳಿಂದ ಬಿಡುಗಡೆ ಮಾಡಲಾಗಿದ್ದು, ಹೊಸದಾಗಿ 136 ಕೊರೊನಾ ಪ್ರಕರಣಗಳು ಹಾಗೂ 2 ಮರಣ ಪ್ರಕರಣಗಳು ಮಂಗಳವಾರ ದೃಢಪಟ್ಟಿದೆ.

ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 6,350 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಈ ಪೈಕಿ ಇಲ್ಲಿಯವರೆಗೆ ಒಟ್ಟು 5,465 ಜನ ಕೋವಿಡ್‍ನಿಂದ ಗುಣಮುಖರಾಗಿದ್ದಾರೆ. ಹೊಸದಾಗಿ ದೃಢಪಟ್ಟವರಲ್ಲಿ ಬಾಗಲಕೋಟೆ ತಾಲೂಕಿನಲ್ಲಿ 19, ಬಾದಾಮಿ 15, ಹುನಗುಂದ 41, ಬೀಳಗಿ 3, ಮುಧೋಳ 29, ಜಮಖಂಡಿ 27 ಹಾಗೂ ಬೇರೆ ಜಿಲ್ಲೆಯ ಇಬ್ಬರಿಗೆ ಸೋಂಕು ದೃಢಪಟ್ಟಿದ್ದು, ಅವರನ್ನು ನಿಗದಿತ ಆಸ್ಪತ್ರೆ ಮತ್ತು ಸಿಸಿಸಿ ಕೇಂದ್ರಗಳಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಜಿಲ್ಲಾ ಕೋವಿಡ್ ಲ್ಯಾಬ್‍ನಲ್ಲಿ ಪರಿಕ್ಷಿಸಲಾಗುತ್ತಿದ್ದ 206 ಸ್ಯಾಂಪಲ್‍ಗಳ ವರದಿಯನ್ನು ನಿರೀಕ್ಷಿಸಲಾಗುತ್ತಿದೆ. ಪ್ರತ್ಯೇಕವಾಗಿ 249 ಜನ ನಿಗಾದಲ್ಲಿದ್ದಾರೆ. ಜಿಲ್ಲೆಯಿಂದ ಇಲ್ಲಿಯವರೆಗೆ ಒಟ್ಟು 62,007 ಸ್ಯಾಂಪಲ್‍ಗಳನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ಈ ಪೈಕಿ 55,142 ನೆಗಟಿವ್ ಪ್ರಕರಣ, 6,350 ಪಾಜಿಟಿವ್ ಪ್ರಕರಣ ಹಾಗೂ 76 ಜನ ಮೃತ ಪ್ರಕರಣ ವರದಿಯಾಗಿರುತ್ತದೆ.

ಇನ್ನು 809 ಮಾತ್ರ ಸಕ್ರಿಯ ಪ್ರಕರಣಗಳು ಇವೆ. ಇಲ್ಲಿವರೆಗೆ ಒಟ್ಟು 214 ಸ್ಯಾಂಪಲ್‍ಗಳು ಮಾತ್ರ ರಿಜೆಕ್ಟ್​ ಆಗಿರುತ್ತವೆ. ಕಂಟೈನ್ಮೆಂಟ್ ಝೋನ್ 585 ಇದ್ದು, ಇನ್‍ಸ್ಟಿಟ್ಯೂಶನ್ ಕ್ವಾಂರಂಟೈನ್‍ನಲ್ಲಿದ್ದ 8,698 ಜನರನ್ನು ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ABOUT THE AUTHOR

...view details