ಬಾಗಲಕೋಟೆ:ಇಲ್ಲಿನ ಜಿಲ್ಲಾಸ್ಪತ್ರೆಯಲ್ಲಿ 4 ಕೋಟಿ ರೂ. ವೆಚ್ಚದ ನೂತನ ಕಟ್ಟಡ ಕಾಮಗಾರಿಗೆ ಶಾಸಕ ವೀರಣ್ಣ ಚರಂತಿಮಠ ಇಂದು ಚಾಲನೆ ನೀಡಿದರು.
ಬಾಗಲಕೋಟೆ ಜಿಲ್ಲಾಸ್ಪತ್ರೆಯಲ್ಲಿ ನೂತನ ಕಟ್ಟಡ ನಿರ್ಮಾಣ ಕಾಮಗಾರಿಗೆ ಚಾಲನೆ - bagalkot district hospital
ಬಾಗಲಕೋಟೆ: ಇಲ್ಲಿನ ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ 4 ಕೋಟಿ ರೂ. ವೆಚ್ಚದ ನೂತನ ಕಟ್ಟಡ ಕಾಮಗಾರಿಗೆ ಶಾಸಕ ವೀರಣ್ಣ ಚರಂತಿಮಠ ಚಾಲನೆ ನೀಡಿದರು. ಭೂಮಿ ಪೂಜೆ ಮಾಡುವ ಮೂಲಕ ಕಟ್ಟಡ ಕಾಮಗಾರಿಗೆ ಅವರು ಚಾಲನೆ ನೀಡಿದರು. ಶವಾಗಾರ, ಔಷಧ ಸಂಗ್ರಹಾಲಯ, ಶೌಚಾಲಯ ಸೇರಿದಂತೆ ಇತರ ವಿಭಾಗಗಳ ನಿರ್ಮಾಣಕ್ಕೆ ಆರೋಗ್ಯ ಇಲಾಖೆ ವತಿಯಿಂದ ನಾಲ್ಕು ಕೋಟಿ ರೂ. ಬಿಡುಗಡೆ ಮಾಡಿದೆ.
ಭೂಮಿ ಪೂಜೆ ಮಾಡುವ ಮೂಲಕ ಕಟ್ಟಡ ಕಾಮಗಾರಿಗೆ ಅವರು ಚಾಲನೆ ನೀಡಿದರು. ಶವಾಗಾರ, ಔಷಧ ಸಂಗ್ರಹಾಲಯ, ಶೌಚಾಲಯ ಸೇರಿದಂತೆ ಇತರ ವಿಭಾಗಗಳ ನಿರ್ಮಾಣಕ್ಕೆ ಆರೋಗ್ಯ ಇಲಾಖೆ ವತಿಯಿಂದ ನಾಲ್ಕು ಕೋಟಿ ರೂ. ಬಿಡುಗಡೆ ಮಾಡಿದೆ.
ಈ ಸಂದರ್ಭದಲ್ಲಿ ಶಾಸಕ ವೀರಣ್ಣ ಚರಂತಿಮಠ ಮಾತನಾಡಿ, ಗುಣಮಟ್ಟದ ಕಟ್ಟಡ ನಿರ್ಮಾಣ ಮಾಡುವಂತೆ ಗುತ್ತಿಗೆದಾರರಿಗೆ ಸೂಚಿಸಲಾಗಿದೆ. 11 ತಿಂಗಳ ಅವಧಿಯಲ್ಲಿ ಕಾಮಗಾರಿ ಪೂರ್ಣಗೊಳ್ಳಲಿದ್ದು, ನಂತರ ಇಂಜಿನಿಯರಿಂಗ್ ಕಾಲೇಜಿನ ಸಮಿತಿ ಮೂಲಕ ಗುಣಮಟ್ಟದ ಪರೀಕ್ಷೆ ಮಾಡಿಸಿ, ಹಣ ಬಿಡುಗಡೆ ಮಾಡುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿರುವುದಾಗಿ ತಿಳಿಸಿದರು.