ಬಾಗಲಕೋಟೆ: ಜಿಲ್ಲೆಯಲ್ಲಿ ಸಂಚಾರ ನಿಯಮ ಪಾಲನೆ, ಶಾಂತಿ ಸುವ್ಯವಸ್ಥೆ ಹಾಗೂ ಮಟ್ಕಾ ಜೂಜು ಅಡ್ಡೆಯನ್ನು ನಿಯಂತ್ರಣಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ನೂತನವಾಗಿ ಅಧಿಕಾರ ಸ್ವೀಕರಿಸಿದ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಲೋಕೇಶ್ ಜಗಲಸಾರ ತಿಳಿಸಿದ್ದಾರೆ.
ಮಟ್ಕಾ ಜೂಜು ಅಡ್ಡೆ ನಿಯಂತ್ರಣಕ್ಕೆ ಹೆಚ್ಚಿನ ಆದ್ಯತೆ: ಬಾಗಲಕೋಟೆ ಹೊಸ ಎಸ್ಪಿ - Bagalkote
ಬಾಗಲಕೋಟೆ ಜಿಲ್ಲೆಯಲ್ಲಿ ಸಂಚಾರ ನಿಯಮ ಪಾಲನೆ, ಶಾಂತಿ ಸುವ್ಯವಸ್ಥೆ ಹಾಗೂ ಮಟ್ಕಾ ಜೂಜು ಅಡ್ಡೆಯನ್ನು ನಿಯಂತ್ರಣಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ನೂತನವಾಗಿ ಅಧಿಕಾರ ಸ್ವೀಕರಿಸಿದ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಲೋಕೇಶ್ ಜಗಲಸಾರ ತಿಳಿಸಿದ್ದಾರೆ.
![ಮಟ್ಕಾ ಜೂಜು ಅಡ್ಡೆ ನಿಯಂತ್ರಣಕ್ಕೆ ಹೆಚ್ಚಿನ ಆದ್ಯತೆ: ಬಾಗಲಕೋಟೆ ಹೊಸ ಎಸ್ಪಿ](https://etvbharatimages.akamaized.net/etvbharat/prod-images/768-512-3752498-thumbnail-3x2-bgk.jpg)
ತಮ್ಮ ಕಚೇರಿಯಲ್ಲಿಂದು ಈಟಿವಿ ಭಾರತದೊಂದಿಗೆ ಮಾತನಾಡಿದ ಅವರು, ಬಾಗಲಕೋಟೆ ಪಟ್ಟಣ ಹಾಗೂ ಮುಧೋಳ ಪಟ್ಟಣದಲ್ಲಿ ಟ್ರಾಫಿಕ್ ಸಮಸ್ಯೆ ಇದ್ದು, ಅದನ್ನು ಸರಿದೂಗಿಸುವ ನಿಟ್ಟಿನಲ್ಲಿ ಸ್ಥಳೀಯರೊಂದಿಗೆ ಚರ್ಚೆ ನಡೆಸಿ, ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಯಾವುದೇ ಸಮಸ್ಯೆ ಇರಲಿ, ಎಂತಹ ಅಪರಾಧ ಚಟುವಟಿಕೆಗಳೆ ಇರಲಿ ಅವುಗಳನ್ನು ನಿಯಂತ್ರಿಸುವುದಕ್ಕೆ ಮೊದಲು ಆಧ್ಯತೆ ನೀಡುತ್ತೇನೆ. ಏನಾದರೂ ಅವ್ಯವಹಾರ, ಅನೈತಿಕ ಚಟುವಟಿಕೆಗಳು ಗಮನಕ್ಕೆ ಬಂದಲ್ಲಿ ಸಾರ್ವಜನಿಕರು ನೇರವಾಗಿ ಮಾಹಿತಿ ನೀಡಬಹುದು. ಫೋನ್ ಮುಖಾಂತರ ಮಾಹಿತಿ ನೀಡಿದರು ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದರು.
TAGGED:
Bagalkote