ಬಾಗಲಕೋಟೆ:ಕೊರೊನಾ ಲಾಕ್ಡೌನ್ ವೇಳೆಯಲ್ಲಿ ಬಾಲ್ಯ ವಿವಾಹಗಳು ನಡೆದಿರುವ ಬಗ್ಗೆ ಚರ್ಚೆ ನಡೆಯುತ್ತಲೇ ಇದೆ. ಈ ಮಧ್ಯೆ ಜಾಗೃತರಾಗಿರುವ ಮುಧೋಳ ತಾಲೂಕು ಆಡಳಿತ ಜೂ.18 ರಂದು ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಕಂದ್ರಾಳ ಗ್ರಾಮದಲ್ಲಿ ನಡೆಯಬೇಕಿದ್ದ ಬಾಲ್ಯ ವಿವಾಹವನ್ನು ತಡೆದಿದ್ದಾರೆ.
ಮುಧೋಳ ತಾಲೂಕಿನ ನಾಗರಾಳ ಗ್ರಾಮದಲ್ಲಿ ಅಪ್ರಾಪ್ತ ಬಾಲಕಿ ರಕ್ಷಣೆ ಮಾಡುವಲ್ಲಿ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಖಚಿತ ಮಾಹಿತಿ ಮೇರೆಗೆ ಅಪ್ರಾಪ್ತ ಬಾಲಕಿ ಮನೆಗೆ ಸಿಡಿಪಿಓ ನೇತೃತ್ವದ ತಂಡ ಭೇಟಿ ನೀಡಿ, ಪರಿಶೀಲನೆ ನಡೆಸಿ ನಾಗರಾಳ ಗ್ರಾಮದ 9ನೇ ತರಗತಿ ಓದುತ್ತಿದ್ದ ಅಪ್ರಾಪ್ತ ಬಾಲಕಿಯನ್ನ ರಕ್ಷಣೆ ಮಾಡಿದರು.