ಬಾಗಲಕೋಟೆ: ನವೆಂಬರ್14 ರಿಂದ 20 ರವರೆಗೆ 66ನೇ ಅಖಿಲ ಭಾರತ ಸಹಕಾರ ಸಪ್ತಾಹ ದಿನವನ್ನ ಆಚರಣೆ ಮಾಡಲಾಗುವುದು ಎಂದು ಜಿಲ್ಲಾ ಸಹಕಾರ ಯೂನಿಯನ್ ಬ್ಯಾಂಕ್ನ ಅಧ್ಯಕ್ಷ ಕಾಶಿನಾಥ ಹುಡೇದ ಹೇಳಿದರು.
ಬಾಗಲಕೋಟೆಯಲ್ಲಿ ನ.14ರಿಂದ ಅಖಿಲ ಭಾರತ ಸಹಕಾರ ಸಪ್ತಾಹ
ನವೆಂಬರ್14 ರಿಂದ 20ರವರೆಗೆ 66ನೇ ಅಖಿಲ ಭಾರತ ಸಹಕಾರ ಸಪ್ತಾಹವನ್ನ ಬಾಗಲಕೋಟೆಯಲ್ಲಿ ಮಾಡಲಾಗುವುದು ಎಂದು ಜಿಲ್ಲಾ ಸಹಕಾರ ಯೂನಿಯನ್ ಬ್ಯಾಂಕ್ನ ಅಧ್ಯಕ್ಷ ಕಾಶಿನಾಥ ಹುಡೇದ ಹೇಳಿದರು.
ನವನಗರದ ಪ್ರೆಸ್ಕ್ಲಬ್ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕ ರಾಜ್ಯ ಸಹಕಾರ ಮಹಾ ಮಂಡಳಿ, ಜಿಲ್ಲಾ ಸಹಕಾರ ಯೂನಿಯನ್ ಬ್ಯಾಂಕ್ ಹಾಗೂ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ಗಳ ಸಂಯುಕ್ತಾಶ್ರಯದಲ್ಲಿ ಈ ಕಾರ್ಯಕ್ರಮ ಆಯೋಜನೆ ಮಾಡಲಾಗುತ್ತಿದೆ. ಡಿಸಿಸಿ ಬ್ಯಾಂಕ್ನ ಅಧ್ಯಕ್ಷ ಅಜಯ ಕುಮಾರ ಸರನಾಯಕ ಧ್ವಜಾರೋಹಣ ನೇರವೇರಿಸಲಿದ್ದು, ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಉದ್ಘಾಟನೆ ಮಾಡಲಿದ್ದಾರೆ. ಬಳಿಕ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್.ಪಾಟೀಲ್ ಅವರು ಸಹಕಾರ ಪಿತಾಮಹ ಶ್ರೀಸಿದ್ದನಗೌಡ ಪಾಟೀಲ್ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡಲಿದ್ದಾರೆ ಎಂದರು.
ಹುನಗುಂದ, ಬೀಳಗಿ, ಬಾದಾಮಿ, ಮಹಾಲಿಂಗಪುರ, ಜಮಖಂಡಿ ಹಾಗೂ ಮುಧೋಳ ಪಟ್ಟಣದಲ್ಲಿ ಸಹಕಾರ ಸಪ್ತಾಹ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಸ್ಥಳೀಯ ಶಾಸಕರ ಅಧ್ಯಕ್ಷತೆಯಲ್ಲಿ ಸಹಕಾರ ಬಗ್ಗೆ ಹಾಗೂ ರೈತರ ಅನುಕೂಲಕರ ಯೋಜನೆಗಳ ಮಾಹಿತಿ ನೀಡಲಾಗುವುದು ಎಂದರು.