ಕರ್ನಾಟಕ

karnataka

ETV Bharat / state

ಬಾಗಲಕೋಟೆ: ಒಂಟಿಕಾಲಿನಲ್ಲಿ ನಿಂತು ಪ್ರತಿಭಟನೆ ನಡೆಸಿದ ರೈತ

ಕೇಂದ್ರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಬಾಗಲಕೋಟೆ ನಗರದ ಬಸವೇಶ್ವರ ವೃತ್ತದಲ್ಲಿ ರೈತ ಬಿ.ಎಸ್. ಬಜನ್ನವರ್ ವಿನೂತನವಾಗಿ ಪ್ರತಿಭಟನೆ ನಡೆಸಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

one man protest at bagalkote
ಒಂಟಿಕಾಲಿನಲ್ಲಿ ನಿಂತು ಪ್ರತಿಭಟನೆ ನಡೆಸಿದ ಬಾಗಲಕೋಟೆ ರೈತ ಬಿ.ಎಸ್. ಬಜನ್ನವರ್

By

Published : Feb 6, 2021, 7:19 PM IST

ಬಾಗಲಕೋಟೆ: ಕೇಂದ್ರ ಸರ್ಕಾರದ ಕೃಷಿ ನೀತಿ ವಿರೋಧಿಸಿ ಹಾಗೂ ರೈತರು ನಡೆಸುತ್ತಿರುವ ಹೋರಾಟಕ್ಕೆ ಬೆಂಬಲ‌ ವ್ಯಕ್ತಪಡಿಸಿ ಒಬ್ಬಂಟಿಯಾಗಿ ಒಂಟಿಕಾಲ ಮೇಲೆ ಪ್ರತಿಭಟನೆ ಮಾಡುವ ಮೂಲಕ ರೈತನೊಬ್ಬ ಗಮನ ಸೆಳೆದಿದ್ದಾರೆ.

ಒಂಟಿಕಾಲಿನಲ್ಲಿ ನಿಂತು ಪ್ರತಿಭಟನೆ

ಕೇಂದ್ರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಬಾಗಲಕೋಟೆ ನಗರದ ಬಸವೇಶ್ವರ ವೃತ್ತದಲ್ಲಿ ಬಿ.ಎಸ್. ಬಜನ್ನವರ್ ವಿನೂತನವಾಗಿ ಪ್ರತಿಭಟನೆ ನಡೆಸಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಬಸವೇಶ್ವರ ವೃತ್ತದಲ್ಲಿ ಅಂದಾಜು ಎರಡೂವರೆ ಗಂಟೆಗೂ ಮೀರಿ ಒಂಟಿಕಾಲಿನ ಮೇಲೆ‌‌ ನಿಂತು, ಕೇಂದ್ರ ಸರ್ಕಾರದ ಕೃಷಿ ನೀತಿಯ ವಿರುದ್ಧ ರೈತರು ಹಮ್ಮಿಕೊಂಡಿರುವ ಹೆದ್ದಾರಿ ಬಂದ್​ಗೆ ಬೆಂಬಲ ವ್ಯಕ್ತಪಡಿಸಿದರು.

ಈ ಸುದ್ದಿಯನ್ನೂ ಓದಿ:ರೈತರ ಪ್ರತಿಭಟನೆ: ಒಂದು ಗಂಟೆ ಟ್ರಾಫಿಕ್​​ನಲ್ಲಿ ಸಿಲುಕಿದ ಆ್ಯಂಬುಲೆನ್ಸ್..!

ಬಾಗಲಕೋಟೆ ತಾಲೂಕಿನ ಮುಗಳೊಳ್ಳಿ ಗ್ರಾಮದ ರೈತ ಹಾಗೂ ಗ್ರಾ.ಪಂ. ಮಾಜಿ ಅಧ್ಯಕ್ಷರಾಗಿರುವ ಬಿ.ಎಸ್. ಬಜನ್ನವರ್ ಈ ರೀತಿ ವಿನೂತನ ಪ್ರತಿಭಟನೆ ನಡೆಸಿ ರೈತರ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದರು. ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆಯಿಂದ ರೈತರು ಸಂಕಷ್ಟಕ್ಕೀಡಾಗಿದ್ದಾರೆ. ಗಾಯದ ಮೇಲೆ‌ ಬರೆ ಎಳೆದ ಪರಿಸ್ಥಿತಿ ನಿರ್ಮಾಣವಾಗಿದೆ. ಬಂಡವಾಳ‌ ಶಾಹಿಗಳ ಪರವಾಗಿ ‌ನಿಲ್ಲದೇ ರೈತ ಪರ ಕೃಷಿ ‌ನೀತಿ ಜಾರಿಗೆಗೊಳಿಸಬೇಕು ಎಂದು ಈ ವೇಳೆ ಆಗ್ರಹಿಸಿದರು.

ABOUT THE AUTHOR

...view details