ಬಾಗಲಕೋಟೆ:ಅಕ್ರಮ ಸಂಬಂಧ ಶಂಕೆ ಹಿನ್ನೆಲೆ ವ್ಯಕ್ತಿಯ ಮೇಲೆ ಹಲ್ಲೆ ಮಾಡಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಗಾಯಗೊಂಡ ವ್ಯಕ್ತಿ ಮೃತಪಟ್ಟಿರುವ ಘಟನೆ ಜಿಲ್ಲೆಯ ನರೇನೂರ ಗ್ರಾಮದಲ್ಲಿ ನಡೆದಿದೆ.
ಅಕ್ರಮ ಸಂಬಂಧ ಶಂಕೆ ಹಿನ್ನೆಲೆ ಹಲ್ಲೆ: ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು - ವ್ಯಕ್ತಿ ಸಾವು
ಅಕ್ರಮ ಸಂಬಂಧ ಶಂಕೆ ಹಿನ್ನೆಲೆ ಲಕ್ಷ್ಮಣ ವಡ್ಡರ ಎಂಬಾತನ ಮೇಲೆ ಹಲ್ಲೆ ಮಾಡಲಾಗಿತ್ತು. ಚಿಕಿತ್ಸೆ ಫಲಿಸದೆ ಆತ ಇಂದು ಸಾವನಪ್ಪಿದ್ದಾನೆ ಎಂದು ತಿಳಿದು ಬಂದಿದೆ.
ಲಕ್ಷ್ಮಣ ವಡ್ಡರ (45) ಮೃತ ವ್ಯಕ್ತಿ. ಅಕ್ರಮ ಸಂಬಂಧ ಶಂಕೆ ಹಿನ್ನೆಲೆ ಲಕ್ಷ್ಮಣನ ಮೇಲೆ ಹಲ್ಲೆ ಮಾಡಲಾಗಿತ್ತು. ಹಲ್ಲೆ ಮಾಡಿದವರ ವಿರುದ್ಧ ದೂರು ದಾಖಲಿಸಲಾಗಿದೆ. ಅನೈತಿಕ ಸಂಬಂಧದ ಬಗ್ಗೆ ಮೊದಲು ತಿಳಿಹೇಳಲಾಗಿದೆ. ಮಾತು ಕೇಳದ ಹಿನ್ನೆಲೆ ಕೆಲವರು ಸೇರಿಕೊಂಡು ಹಲ್ಲೆ ಮಾಡಿದ್ದರು. ಇದರಿಂದ ತೀವ್ರ ಗಾಯಗೊಂಡಿದ್ದ. ಆತನನ್ನು ಸಂಬಂಧಿಕರು ಕೆರೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಲಕ್ಷ್ಮಣ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.
ಈ ಬಗ್ಗೆ ಕೆರೂರು ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ.