ಬಾಗಲಕೋಟೆ:ಜಿಲ್ಲಾ ನಗರಸಭೆ ವ್ಯಾಪ್ತಿಯ ವಾರ್ಡ್ಗಳಲ್ಲಿ ಒಂದು ಕೋಟಿ ಮೊತ್ತದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ವೀರಣ್ಣ ಚರಂತಿಮಠ ಅವರು ಶನಿವಾರ ಭೂಮಿ ಪೂಜೆ ನೆರವೇರಿಸಿದರು.
1₹ ಕೋಟಿ ಮೊತ್ತದ ಅಭಿವೃದ್ಧಿ ಕಾಮಗಾರಿಗೆ ಶಾಸಕ ಚರಂತಿಮಠ ಚಾಲನೆ.. - ನಗರಸಭೆ ಅಧಿಕಾರಿಗಳು
ಬಾಗಲಕೋಟೆ ಜಿಲ್ಲಾ ನಗರಸಭೆ ವ್ಯಾಪ್ತಿಯ ವಾರ್ಡ್ಗಳಲ್ಲಿ ಒಂದು ಕೋಟಿ ಮೊತ್ತದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ವೀರಣ್ಣ ಚರಂತಿಮಠ ಭೂಮಿ ಪೂಜೆ ನೆರವೇರಿದರು.
ಒಟ್ಟು 10 ವಾರ್ಡ್ಗಳಲ್ಲಿ ನಡೆಯಲಿರುವ ಕಾಮಗಾರಿಗಳಿಗೆ ಶಾಸಕರು ಚಾಲನೆ ನೀಡಿದರು. 2019-20ರ ಎಸ್ಎಫ್ಸಿ ಹಾಗೂ 14ನೇ ಹಣಕಾಸು ಆಯೋಗದಲ್ಲಿ ಈ ಕಾಮಗಾರಿಗಳಿಗೆ ಅನುದಾನ ಮಂಜೂರು ಆಗಲಿದೆ.ಈ ಬಗ್ಗೆ ಮಾತನಾಡಿದ ಶಾಸಕರು, ಗುತ್ತಿಗೆದಾರರು ಕಳಪೆ ಕಾಮಗಾರಿ ಮಾಡಬಾರದು. ಗುಣಮಟ್ಟದಿಂದ ಕೂಡಿರಬೇಕು, ಕಳಪೆ ಕಂಡು ಬಂದಲ್ಲಿ ಅಂತಹವರನ್ನು ಕಪ್ಪುಪಟ್ಟಿಗೆ ಸೇರಿಸಲಾಗುವುದು. ಕಾಲಮಿತಿಯಲ್ಲಿ ಕಾಮಗಾರಿ ಪೂರ್ಣಗೊಳಿಸಬೇಕು ಎಂದು ಎಚ್ಚರಿಸಿದರು.
ಅಭಿವೃದ್ಧಿ ಕಾರ್ಯವನ್ನು ಕಾಲಕಾಲಕ್ಕೆ ಪರಿಶೀಲನೆ ನಡೆಸಬೇಕು ಎಂದು ನಗರಸಭೆ ಅಧಿಕಾರಿಗಳಿಗೆ ಸೂಚಿಸಿದರು. ವಾಂಬೆ ಹಾಗೂ ಆಶ್ರಯ, ವಾಜಪೇಯಿ, ರಾಜೀವ್ಗಾಂಧಿ ಕಾಲೋನಿಯಲ್ಲಿ ಸ್ವಚ್ಛತೆಗೆ ಹೆಚ್ಚು ಗಮನಹರಿಸಬೇಕು ಎಂದು ಹೇಳಿದರು. ನಗರಸಭೆ ಸಿಬ್ಬಂದಿಗೆ ಸಾರ್ವಜನಿಕರೂ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.ವಿದ್ಯಾಗಿರಿ ಹಾಗೂ ನವನಗರದಲ್ಲಿ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದ್ದು, ಮುಂದಿನ ದಿನಗಳಲ್ಲಿ ಬಾಗಲಕೋಟೆ ಹಳೇ ಭಾಗದಲ್ಲಿ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಲಾಗುವುದು ಎಂದರು.