ಕರ್ನಾಟಕ

karnataka

By

Published : Apr 24, 2020, 2:34 PM IST

ETV Bharat / state

ಎಪಿಎಂಸಿಯಲ್ಲಿ ತರಕಾರಿ ಮಾರಾಟಕ್ಕೆ ಅನುಕೂಲ ಮಾಡಿಕೊಟ್ಟ ಪೊಲೀಸ್​​ ಇಲಾಖೆ

ಲೋಕಾಪುರ ಎಪಿಎಂಸಿ ಮಾರುಕಟ್ಟೆಯಲ್ಲಿ ತರಕಾರಿ ಮಾರಾಟಕ್ಕೆ ಅನುಕೂಲ ಮಾಡಿಕೊಟ್ಟಿದ್ದು, ಮೂರು ಅಡಿ ಅಂತರದಲ್ಲಿ ವ್ಯಾಪಾರಸ್ಥರು‌ ಕುಳಿತುಕೊಳ್ಳುವ ವ್ಯವಸ್ಥೆ ಮಾಡಲಾಗಿದೆ. ಈ ಮೂಲಕ ವ್ಯಾಪರಸ್ಥರು ಮತ್ತು ಸಾರ್ವಜನಿಕರು ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ವ್ಯವಸ್ಥೆ ಮಾಡಲಾಗಿದೆ.

Police Department which facilitated vegetable sales at APMC
ತರಕಾರಿ ಮಾರಾಟಕ್ಕೆ ಅನುಕೂಲ ಮಾಡಿಕೊಟ್ಟ ಪೊಲೀಸ್​ ಇಲಾಖೆ

ಬಾಗಲಕೋಟೆ: ಜಿಲ್ಲೆಯ ಲೋಕಾಪುರದಲ್ಲಿ ಲಾಕ್​ಡೌನ್ ಉಲ್ಲಂಘಿಸಿ ಬೇಕಾಬಿಟ್ಟಿ ಸಂಚಾರ ಮಾಡುತ್ತಿರುವುದು ಇತ್ತೀಚೆಗೆ ಮಾಧ್ಯಮದಲ್ಲಿ ವರದಿ ಆಗಿತ್ತು.

ತರಕಾರಿ ಮಾರಾಟಕ್ಕೆ ಅನುಕೂಲ ಮಾಡಿಕೊಟ್ಟ ಪೊಲೀಸ್​ ಇಲಾಖೆ

ಈ ವರದಿ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ ಜಗಲಸಾರ ನೇತೃತ್ವದ ತಂಡ ಹೊಸ ಉಪಾಯವೊಂದನ್ನು ಕಂಡುಕೊಂಡಿದೆ. ಎಪಿಎಂಸಿ ಮಾರುಕಟ್ಟೆಯಲ್ಲಿ ತರಕಾರಿ ಮಾರಾಟಕ್ಕೆ ಅನುಕೂಲ ಮಾಡಿಕೊಟ್ಟಿದ್ದು, ಮೂರು ಅಡಿ ಅಂತರದಲ್ಲಿ ವ್ಯಾಪಾರಸ್ಥರು‌ ಕುಳಿತುಕೊಳ್ಳುವ ವ್ಯವಸ್ಥೆ ಮಾಡಲಾಗಿದೆ. ಈ ಮೂಲಕ ವ್ಯಾಪರಸ್ಥರು ಮತ್ತು ಸಾರ್ವಜನಿಕರು ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ವ್ಯವಸ್ಥೆ ಮಾಡಲಾಗಿದೆ.

ಕಳೆದ ಎರಡು ದಿನಗಳ‌ ಹಿಂದೆ ಲೋಕಾಪುರ ಪಟ್ಟಣದಲ್ಲಿ ಜನರು ಬೇಕಾಬಿಟ್ಟಿ ಓಡಾಟ ಮಾಡಿರುವ ಬಗ್ಗೆ ವರದಿ ಆಗಿತ್ತು. ಈ ಹಿನ್ನೆಲೆ ಪೊಲೀಸ್ ಇಲಾಖೆ ವತಿಯಿಂದ ವ್ಯವಸ್ಥೆ ಮಾಡಲಾಗಿದ್ದು, ಪ್ರತಿಯೊಬ್ಬರು ಸಾಲಾಗಿ ನಿಂತು ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮೂಲಕ ಖರೀದಿಸಲು ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.

ABOUT THE AUTHOR

...view details