ಬಾಗಲಕೋಟೆ: ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ಮಹಾಲಿಂಗಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡುವ ಎಲ್ಲಾ ಸೌಕರ್ಯಗಳಿದ್ದರೂ ಸಹ ಪುನಶ್ಚೇತನಗೊಳಿಸದಿರುವುದು ರೋಗಿಗಳಿಗೆ ದೊಡ್ಡ ಸಮಸ್ಯೆಯಾಗಿದೆ.
ಸಮುದಾಯ ಕೇಂದ್ರದಲ್ಲಿ ಆಕ್ಸಿಜನ್, ವೆಂಟಿಲೇಟರ್ ಬೆಡ್ ಸೌಕರ್ಯ ಮಾಡಲಾಗಿದೆ. ನಿರ್ವಹಣೆ ಮಾಡುವ ಸಿಬ್ಬಂದಿ ಇಲ್ಲದೆ ಎಲ್ಲಾ ಸಾಮಗ್ರಿಗಳು ತುಕ್ಕು ಹಿಡಿದಿವೆ. ಈ ಆರೋಗ್ಯ ಕೇಂದ್ರದಲ್ಲಿ ಪ್ರತ್ಯೇಕ ಆಕ್ಸಿಜನ್ ಒದಗಿಸುವ ಪೈಪ್ಲೈನ್ ಸಹ ಅಳವಡಿಸಲಾಗಿದೆ. ವಿದ್ಯುತ್ ಘಟಕ ಸೇರಿ ಸುಮಾರು 50 ಬೆಡ್ಗಳು ಇವೆ. ಆದರೆ ಅದರ ಸದುಪಯೋಗ ಪಡಿಸಿಕೊಳ್ಳುವಲ್ಲಿ ಸರ್ಕಾರ ಹಾಗೂ ಜಿಲ್ಲಾಡಳಿತ ವಿಫಲವಾಗಿವೆ.