ಬಾಗಲಕೋಟೆ:ತಾಲೂಕು ಪಂಚಾಯಿತಿ ಪ್ರಗತಿ ಪರಿಶೀಲನಾ ಸಭೆಗೆ ಬರುವಂತೆ ಮಾಹಿತಿ ನೀಡಿದ್ದರೂ ಸಭೆಗೆ ಗೈರಾದ ಅಧಿಕಾರಿಗಳಿಗೆ ನೋಟಿಸ್ ನೀಡಿ ಎಂದು ಶಾಸಕ ವೀರಣ್ಣ ಚರಂತಿಮಠ ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಬಸರಿಗಿಡದ ಅವರಿಗೆ ಸೂಚಿಸಿದ್ದಾರೆ.
ನಗರದ ಬಿವ್ಹಿಬ್ಹಿ ಸಂಘದ ಮಿನಿ ಸಭಾಭವನದಲ್ಲಿ ಸೋಮವಾರ ತಾಲೂಕು ಪಂಚಾಯಿತಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸಮಯಕ್ಕೆ ಸರಿಯಾಗಿ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಬೇಕು. ತಿಳಿದಾಗ ಸಭೆಗೆ ಬರಬೇಡಿ ಎಂದರು.