ಕರ್ನಾಟಕ

karnataka

ETV Bharat / state

ಮಲಪ್ರಭಾ ಪ್ರವಾಹಕ್ಕೆ ಸಿಲುಕಿದ್ದ ಜನರ ರಕ್ಷಣೆ: ಪರಿಹಾರ ಕೇಂದ್ರಕ್ಕೆ ಸ್ಥಳಾಂತರ

ಮಲಪ್ರಭಾ ನದಿಯ ಪ್ರವಾಹದಲ್ಲಿ ಸಿಲುಕಿದ್ದ ಸಂತ್ರಸ್ತರಿಗೆ ಸ್ಥಳೀಯ ಶಾಲೆಯಲ್ಲಿ ತಂಗಲು ವ್ಯವಸ್ಥೆ ಮಾಡಲಾಗಿದೆ. ಔಷಧೋಪಚಾರ ವ್ಯವಸ್ಥೆ ಸೇರಿದಂತೆ ಊಟ ಮತ್ತಿತರೆ ಅಗತ್ಯ ವ್ಯವಸ್ಥೆ ಮಾಡಲಾಗಿದೆ. ಬಾಣಂತಿಯರಿಗೂ ಸಹ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ.

ಮಲಪ್ರಭಾ ಪ್ರವಾಹಕ್ಕೆ ಸಿಲುಕಿದ್ದ ಜನರ ರಕ್ಷಣೆ

By

Published : Aug 10, 2019, 11:29 PM IST

ಬಾಗಲಕೋಟೆ :ಜಿಲ್ಲೆಯಲ್ಲಿ ಹರಿಯುತ್ತಿರುವ ನದಿಗಳ ಪ್ರವಾಹದಿಂದ ಸಂತ್ರಸ್ತರಾಗಿರುವ ಜನತೆಗೆ ಜಿಲ್ಲಾಡಳಿತ ಶಾಲೆಗಳಲ್ಲಿ ತಾತ್ಕಾಲಿಕ ಪರಿಹಾರ ಕೇಂದ್ರ ತೆರೆದಿದೆ.

ಹುನಗುಂದ ತಾಲೂಕಿನ ಕಮತಗಿ ಗ್ರಾಮದಲ್ಲಿ ಮಲಪ್ರಭಾ ನದಿಯ ಪ್ರವಾಹದಲ್ಲಿ ಸಿಲುಕಿದ್ದ ಸಂತ್ರಸ್ತರಿಗೆ ಸ್ಥಳೀಯ ಶಾಲೆಯಲ್ಲಿ ತಂಗಲು ವ್ಯವಸ್ಥೆ ಮಾಡಲಾಗಿದೆ. ಔಷಧೋಪಚಾರ ವ್ಯವಸ್ಥೆ ಸೇರಿದಂತೆ ಊಟ ಮತ್ತಿತರೆ ಅಗತ್ಯ ವ್ಯವಸ್ಥೆ ಮಾಡಲಾಗಿದೆ. ಬಾಣಂತಿಯರಿಗೂ ಸಹ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ.

ಜಿಲ್ಲೆಯಲ್ಲಿ ಈಗಾಗಲೇ 42 ಪರಿಹಾರ ಕೇಂದ್ರ ತೆರೆಯಲಾಗಿದೆ. ಸಂಘ-ಸಂಸ್ಥೆಗಳು ಪ್ರವಾಹಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ನೆರೆ ಸಂತ್ರಸ್ತರಿಗೆ ಆಹಾರ ಸಾಮಗ್ರಿ, ಬಟ್ಟೆ, ಸಾಬೂನು ಸೇರಿದಂತೆ ಇತರ ವಸ್ತುಗಳ ವಿತರಣೆ ಮಾಡುವ ಮೂಲಕ ಮಾನವೀಯತೆ ಮೆರೆದಿವೆ.

ಮಲಪ್ರಭಾ ಪ್ರವಾಹಕ್ಕೆ ಸಿಲುಕಿದ್ದ ಜನರ ರಕ್ಷಣೆ

ABOUT THE AUTHOR

...view details