ಕರ್ನಾಟಕ

karnataka

ETV Bharat / state

ಮೀಸಲಾತಿ ಪ್ರಮಾಣ ಹೆಚ್ಚಳಕ್ಕೆ ಒತ್ತಾಯಿಸಿ ಪ್ರತಿಭಟನೆ - undefined

ರಾಜ್ಯ ಸರ್ಕಾರದಿಂದ ದಿವ್ಯ ನಿರ್ಲಕ್ಷ್ಯದಿಂದಾಗಿ ಪರಿಶಿಷ್ಟ ವರ್ಗದ ಸಮುದಾಯಕ್ಕೆ ಸಿಗಬೇಕಾದ ಸವಲತ್ತುಗಳು ಕಾಲಕಾಲಕ್ಕೆ ಸಿಗುತ್ತಿಲ್ಲ. ಈ ಮೂಲಕ ಸಮುದಾಯವನ್ನು ಕಡೆಗಣಿಸಲಾಗುತ್ತಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆ

By

Published : Jun 7, 2019, 3:18 PM IST

ಬಾಗಲಕೋಟೆ:ಪರಿಶಿಷ್ಟ ವರ್ಗದ ಸಮುದಾಯಕ್ಕೆ ಮೀಸಲು ಪ್ರಮಾಣ ಹೆಚ್ಚಳ ಮಾಡಬೇಕು ಎಂದು ಒತ್ತಾಯಿಸಿ ನಗರದಲ್ಲಿ ಜಿಲ್ಲಾ ವಾಲ್ಮೀಕಿ ನಾಯಕ‌ ಮಹಾಸಭಾದ ಸದಸ್ಯರು ಶುಕ್ರವಾರ ಪ್ರತಿಭಟನೆ ನಡೆಸಿದರು.

ನವನಗರದ ಎಸ್.ಪಿ ಕಚೇರಿಯಿಂದ ಜಿಲ್ಲಾಡಳಿತ ಭವನದವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ಮೆರವಣಿಗೆಯುದ್ದಕ್ಕೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಕೇಂದ್ರ ಸರ್ಕಾರ ಶೇ 7.5ರಷ್ಟು ಮೀಸಲು ಪ್ರಮಾಣ ನೀಡುವಂತೆ ಆದೇಶಿಸಿದೆ. ಆದರೆ, ರಾಜ್ಯ ಸರ್ಕಾರ ಕೇವಲ ಶೇ 3ರಷ್ಟು ಮಾತ್ರ ನೀಡುತ್ತಿದೆ ಎಂದು ಆರೋಪಿಸಿದರು.

ಪ್ರತಿಭಟನೆ

ಜಿಲ್ಲಾಡಳಿತ ಭವನದ ಎದುರು ನಡೆದ ಬಹಿರಂಗ ಸಭೆಯಲ್ಲಿ ಮುಖಂಡ ಶಂಭುಗೌಡ ಪಾಟೀಲ್ ಮಾತನಾಡಿ, ಬೇರೆ ರಾಜ್ಯಗಳಲ್ಲಿ ಸಮುದಾಯದ ಜನಸಂಖ್ಯೆಗೆ ಅನುಗುಣವಾಗಿ ಮೀಸಲು ನೀತಿ ಜಾರಿಗೊಳಿಸಲಾಗಿದೆ. ಕರ್ನಾಟಕ ಸರ್ಕಾರ ಮಾತ್ರ ಮೀಸಲು ಪ್ರಮಾಣ ಹೆಚ್ಚಿಸಲು ಮೀನಮೇಷ ಎಣಿಸುತ್ತಿದೆ ಎಂದು ಕಿಡಿಕಾರಿದರು.

ರಾಜ್ಯದಲ್ಲಿ ಜನಗಣತಿ ಪ್ರಕಾರ ಪರಿಶಿಷ್ಟ ವರ್ಗದವರ ಸಂಖ್ಯೆ ಶೇ 6 ರಷ್ಟಿದೆ. ಈ ಜನಸಂಖ್ಯೆ ಪ್ರಮಾಣವು 8 ವರ್ಷಗಳ ಹಿಂದೆ ನಡೆಸಿದ ಜನಗಣತಿ ಆಧಾರಿತವಾಗಿದೆ. ಆದರೀಗ ಶೇ 7.5ಕ್ಕೂ ಅಧಿಕ ಜನಸಂಖ್ಯೆ ಇರಬಹುದು. ಆದ್ದರಿಂದ ‌ಮೀಸಲಾತಿ ಪ್ರಮಾಣ ಹೆಚ್ಚಳ ಮಾಡಲೇಬೇಕು. ಸುಳ್ಳು ಜಾತಿ ಪ್ರಮಾಣ ಪತ್ರ ಪಡೆಯುವವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು. ಈ ಬೇಡಿಕೆಯನ್ನು ಸರ್ಕಾರ ಕೂಡಲೇ ಈಡೇರಿಸಬೇಕು ಎಂದು ಪತ್ರವನ್ನು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

For All Latest Updates

TAGGED:

ABOUT THE AUTHOR

...view details