ಬಾಗಲಕೋಟೆ: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಜಿಲ್ಲಾಡಳಿತ ಭವನದ ಎದುರು ವಿವಿಧ ಮುಸ್ಲಿಂ ಸಂಘಟನಾಕಾರರು ಬೃಹತ್ ಪ್ರತಿಭಟನೆ ನಡೆಸಿದರು.
ಪೌರತ್ವ (ತಿದ್ದುಪಡಿ) ಕಾಯ್ದೆ ವಿರೋಧಿಸಿ ಬಾಗಲಕೋಟೆಯಲ್ಲಿ ಪ್ರತಿಭಟನೆ - Citizenship Amendment Act protest news
ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಜಿಲ್ಲಾಡಳಿತ ಭವನದ ಎದುರು ವಿವಿಧ ಮುಸ್ಲಿಂ ಸಂಘಟನಾಕಾರರು ಬೃಹತ್ ಪ್ರತಿಭಟನೆ ನಡೆಸಿದರು.
ಸಿಎಎ ಹಾಗೂ ಎನ್ಆರ್ಸಿ ಕಾಯ್ದೆ ಕೇಂದ್ರ ಸರ್ಕಾರ ಜಾರಿಗೆ ತರಬಾರದು ಎಂದು ಪ್ರಧಾನಿ ಮೋದಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಈ ಮೊದಲು ಅಂಜುಮನ್ ಸಂಸ್ಥೆಯ ವತಿಯಿಂದ ಬೃಹತ್ ಪ್ರತಿಭಟನಾ ಮೆರವಣಿಗೆಯನ್ನು ಜಿಲ್ಲಾಡಳಿತ ಭವನದವರೆಗೆ ನಡೆಸಲಾಯಿತು.
ನಂತರ ಜಿಲ್ಲಾಡಳಿತ ಭವನದಲ್ಲಿ ಪ್ರಮುಖ ಮುಖಂಡರು ಮಾತನಾಡಿ, ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ಆದಲ್ಲಿ ಮುಸ್ಲಿಂ ಸಮುದಾಯದವರಿಗೆ ಸಾಕಷ್ಟು ತೊಂದರೆ ಆಗಲಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಇಂತಹ ಯೋಜನೆ ಜಾರಿಗೆ ತರಬಾರದು. ಇಡೀ ದೇಶಾದ್ಯಂತ ಮುಸ್ಲಿಂ ಜನಾಂಗದವರು ಇದನ್ನು ವಿರೋಧಿಸಿದ್ದಾರೆ. ಪ್ರಧಾನಿ ಮೋದಿ ಅವರು ಮುಸ್ಲಿಂ ಸಮುದಾಯದವರನ್ನು ಭಾರತದಿಂದ ಓಡಿಸುವ ಹುನ್ನಾರ ನಡೆಸಿದ್ದಾರೆ ಎಂದರು.