ಬಾಗಲಕೋಟೆ:ಹೆಚ್ಚಿನ ಸಂಖ್ಯೆಯಲ್ಲಿ ಬಸ್ಗಳ ವ್ಯವಸ್ಥೆ ಮಾಡುವಂತೆ ಆಗ್ರಹಿಸಿ ಟಯರ್ಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದ ಘಟನೆ ಜಿಲ್ಲೆಯ ಜಮಖಂಡಿ ತಾಲೂಕಿನ ಜಂಬಗಿ ಬಿ.ಕೆ.ಗ್ರಾಮದಲ್ಲಿ ನಡೆದಿದೆ.
ಈ ಮೊದಲು ಐದಾರು ಬಸ್ಗಳು ಸಂಚಾರ ಮಾಡುತ್ತಿದ್ದವು. ಇದೀಗ ಎರಡು ಬಸ್ಗಳು ಮಾತ್ರ ಸಂಚಾರ ಮಾಡುತ್ತಿವೆ. ಇದರಿಂದ ವಿದ್ಯಾರ್ಥಿಗಳು ಕಾಲೇಜಿಗೆ ಹೋಗಲು, ಜಮಖಂಡಿಗೆ ತೆರಳುವುದಕ್ಕೆ ತೊಂದರೆ ಉಂಟಾಗುತ್ತಿದೆ ಎಂದು ಆರೋಪಿಸಿ ವಿದ್ಯಾರ್ಥಿಗಳು, ಪಾಲಕರು ರಸ್ತೆ ತಡೆದು ಟಯರ್ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.