ಬಾಗಲಕೋಟೆ: ಕಳೆದ ನಾಲ್ಕು ತಿಂಗಳ ವೇತನವನ್ನು ಶೀಘ್ರವಾಗಿ ನೀಡಬೇಕು ಎಂದು ಆಗ್ರಹಿಸಿ ಅಕ್ಷರ ದಾಸೋಹ ಕಾರ್ಯಕರ್ತೆಯರು ಜಿಲ್ಲಾಡಳಿತ ಭವನ ಎದುರು ಪ್ರತಿಭಟನೆ ನಡೆಸಿದರು.
ವೇತನಕ್ಕಾಗಿ ಆಗ್ರಹಿಸಿ ಅಕ್ಷರ ದಾಸೋಹ ಕಾರ್ಯಕರ್ತೆಯರ ಪ್ರತಿಭಟನೆ - Literacy activists
ವೇತನಕ್ಕಾಗಿ ಹೋರಾಟ ನಡೆಸುತ್ತಿದ್ದರೂ ಸಹ ಸರ್ಕಾರ ನಿರ್ಲಕ್ಷಿಸಿದೆ ಎಂದು ಆರೋಪಿಸಿ ಅಕ್ಷರ ದಾಸೋಹ ಕಾರ್ಯಕರ್ತೆಯರು ಜಿಲ್ಲಾಡಳಿತ ಭವನದ ಮುಂದೆ ಪ್ರತಿಭಟನೆ ನಡೆಸಿದ್ದಾರೆ.
ವೇತನಕ್ಕಾಗಿ ಆಗ್ರಹಿಸಿ ಅಕ್ಷರದಾಸೋಹ ಕಾರ್ಯಕರ್ತೆಯರ ಪ್ರತಿಭಟನೆ
ಕೋವಿಡ್ ಸಮಯದಲ್ಲಿ ಗ್ರಾಮೀಣ ಪ್ರದೇಶದಲ್ಲಿ ಬಿಸಿ ಊಟ ನೀಡುವ ಕಾರ್ಯದಲ್ಲಿ ತೊಡಗಿದ್ದೇವೆ. ಶಾಲೆ ಇಲ್ಲದಿದ್ದರು ಸಹ ಶಿಕ್ಷಕರಿಗೆ ವೇತನ ನೀಡಿದ್ದಾರೆ. ಆದರೆ ಬಿಸಿ ಊಟ ಕಾರ್ಯಕರ್ತರಿಗೆ ಮಾತ್ರ ಕಳೆದ ನಾಲ್ಕು ತಿಂಗಳನಿಂದಲೂ ವೇತನ ನೀಡಿಲ್ಲ.
ಇದರಿಂದ ಜೀವನ ಸಾಗಿಸಲು ಸಾಕಷ್ಟು ತೊಂದರೆ ಉಂಟಾಗಿದೆ. ವೇತನಕ್ಕಾಗಿ ಅನಿರ್ಧಿಷ್ಟಾವಾಧಿ ಪ್ರತಿಭಟನೆ ನಡೆಸಿದರೂ ಸರ್ಕಾರ ಕಣ್ಣು ತೆರೆದು ನೋಡುತ್ತಿಲ್ಲ. ಆದ್ದರಿಂದ ನಮ್ಮ ಬೇಡಿಕೆ ಈಡೇರುವವರೆಗೂ ಹೋರಾಟ ಕೈ ಬಿಡುವುದಿಲ್ಲ ಎಂದು ಎಚ್ಚರಿಸಿ ಜಿಲ್ಲಾಧಿಕಾರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.