ಬಾಗಲಕೋಟೆ: ಕರ್ನಾಟಕ ರಾಜ್ಯದಲ್ಲಿ ಮದ್ಯ ನಿಷೇಧ ಮಾಡಬೇಕು ಎಂದು ಆಗ್ರಹಿಸಿ ಕೂಡಲಸಂಗಮದಲ್ಲಿ ಮದ್ಯ ನಿಷೇಧ ಆಂದೋಲನ ಸಂಘಟನೆ ವತಿಯಿಂದ ಪ್ರತಿಭಟನೆ ನಡೆಸಲಾಗುತ್ತಿದೆ.
ಕೂಡಲಸಂಗಮದಲ್ಲಿ ಮಹಿಳೆಯರಿಂದ ಮದ್ಯ ನಿಷೇಧ ಆಂದೋಲನ - ಬಾಗಲಕೋಟೆಯಲ್ಲಿ ಮಹಿಳೆಯರಿಂದ ಪ್ರತಿಭಟನೆ ಸುದ್ದಿ
ಕರ್ನಾಟಕ ರಾಜ್ಯದಲ್ಲಿ ಮದ್ಯ ನಿಷೇಧ ಮಾಡಬೇಕು ಎಂದು ಆಗ್ರಹಿಸಿ ಕೂಡಲಸಂಗಮದಲ್ಲಿ ಮದ್ಯ ನಿಷೇಧ ಆಂದೋಲನ ಸಂಘಟನೆ ವತಿಯಿಂದ ಪ್ರತಿಭಟನೆ ನಡೆಸಲಾಗ್ತಿದೆ.
ಕಳೆದ ಆರು ವರ್ಷಗಳಿಂದ ಮದ್ಯಪಾನ ನಿಷೇಧ ಮಾಡಬೇಕು ಎಂದು ಆಗ್ರಹಿಸಿ ಮಹಿಳೆಯರು ಸಹಿ ಸಂಗ್ರಹಣೆ ಜೊತೆಗೆ ಉಪವಾಸ ಸತ್ಯಾಗ್ರಹ ಮಾಡುತ್ತಲೇ ಬಂದಿದ್ದಾರೆ. ಮದ್ಯಪಾನದಿಂದ ಕುಟುಂಬಗಳು ನಾಶವಾಗುತ್ತಿದ್ದು, ಮಹಿಳೆಯರ ಹಾಗೂ ಮಕ್ಕಳ ಮೇಲೆ ಅತ್ಯಾಚಾರ ನಡೆಯುತ್ತಿದೆ. ಈ ಹಿನ್ನೆಲೆ ಈ ಬಾರಿ ಧಾರ್ಮಿಕ ಕ್ಷೇತ್ರದಲ್ಲಿ ಉಪವಾಸ ಸತ್ಯಾಗ್ರಹ, ಜಲ ಸತ್ಯಾಗ್ರಹ ಸೇರಿದಂತೆ ಉಗ್ರ ಸ್ವರೂಪದ ಹೋರಾಟ ಮಾಡಲು ಮಹಿಳೆಯರು ನಿರ್ಧಾರ ಮಾಡಿದ್ದಾರೆ.
ಜಿಲ್ಲೆಯ ವಿವಿಧ ಪ್ರದೇಶಗಳ ಮಹಿಳೆಯರು ಆಗಮಿಸಿದ್ದು, ಎಲ್ಲರೂ ಸಹಿ ಸಂಗ್ರಹ ಮಾಡಿ, ಸರ್ಕಾರಕ್ಕೆ ಕಳಿಸಲಿದ್ದಾರೆ. ಈ ಸಂದರ್ಭದಲ್ಲಿ ಸಂಘಟನೆ ರಾಜ್ಯ ಸಂಚಾಲಕರಾದ ಶ್ರೀಮತಿ ಮೊಕಷಮ್ಮ ಮಾತನಾಡಿ, ಇಡೀ ರಾಜ್ಯದಲ್ಲಿ ಮದ್ಯ ನಿಷೇಧ ಮಾಡಬೇಕು. ಈಗ ಸಾಂಕೇತಿಕವಾಗಿ ಉಪವಾಸ ಸತ್ಯಾಗ್ರಹ ಪ್ರತಿಭಟನೆ ಪ್ರಾರಂಭ ಮಾಡಿದ್ದೇವೆ. ಸರ್ಕಾರ ಈ ಬಗ್ಗೆ ಗಮನ ಹರಿಸದೆ ಇದ್ದಲ್ಲಿ ಉಗ್ರ ಸ್ವರೂಪದ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದರು.