ಬಾಗಲಕೋಟೆ: ರಾಜ್ಯದಿಂದ ಆಯ್ಕೆಯಾಗಿರುವ ಲೋಕಸಭಾ ಸದಸ್ಯರು ಹಾಗೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕೇಂದ್ರ ಸರ್ಕಾರ ಮಾಡುತ್ತಿರುವ ಅನ್ಯಾಯದ ಬಗ್ಗೆ ತುಟಿ ಬಿಚ್ಚಿ ಮಾತನಾಡುವಂತೆ ವಿಧಾನ ಪರಿಷತ್ ಸದಸ್ಯ ಆರ್.ಬಿ.ತಿಮ್ಮಾಪೂರ ವಿನಂತಿಸಿಕೊಂಡಿದ್ದಾರೆ.
ಕೇಂದ್ರ ಸರ್ಕಾರ ಮಾಡುತ್ತಿರುವ ಅನ್ಯಾಯದ ವಿರುದ್ಧ ಬಿಎಸ್ವೈ ತುಟಿ ಬಿಚ್ಚಿ ಮಾತನಾಡಬೇಕು: ಆರ್.ಬಿ.ತಿಮ್ಮಾಪುರ - ವಿಧಾನ ಪರಿಷತ್ ಸದಸ್ಯರಾದ ಆರ್.ಬಿ.ತಿಮ್ಮಾಪೂರ
ಕೇಂದ್ರ ಸರ್ಕಾರ ಅದಾನಿ, ಅಂಬಾನಿ ಅವರಂತಹ ಬಂಡವಾಳಶಾಹಿಗಳ ಜೊತೆಗೆ ಕೈ ಜೋಡಿಸಿಕೊಂಡಿದ್ದು, ರಾಜ್ಯದಲ್ಲಿ ಅಭಿವೃದ್ಧಿ ಕುಂಠಿತವಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಆರ್.ಬಿ.ತಿಮ್ಮಾಪೂರ ಆರೋಪಿಸಿದ್ದಾರೆ.
ನವನಗರದ ಪ್ರೆಸ್ ಕ್ಲಬ್ನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ಅದಾನಿ, ಅಂಬಾನಿ ಅವರಂತಹ ಬಂಡವಾಳಶಾಹಿಗಳ ಜೊತೆಗೆ ಕೈ ಜೋಡಿಸಿಕೊಂಡಿದ್ದು, ಅಭಿವೃದ್ಧಿ ಕುಂಠಿತವಾಗಿದೆ. ರಾಜ್ಯದ ಜನತೆಗೆ ಸರ್ಕಾರ ಅನ್ಯಾಯ ಮಾಡುತ್ತಿದೆ ಎಂದು ಆರೋಪಿಸಿದರು.
ದಿನಸಿ ವಸ್ತುಗಳ ಬೆಲೆ ಏರಿಕೆ ಸೇರಿದಂತೆ ಪೆಟ್ರೋಲಿಯಂ ವಸ್ತುಗಳ ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಇದರಿಂದಾಗಿ ಸಾಮಾನ್ಯ ಜನರು ಸಾಕಷ್ಟು ತೊಂದರೆ ಅನುಭವಿಸುವಂತಾಗಿದೆ. ಕೇಂದ್ರ ಸರ್ಕಾರ ದೇಶವನ್ನು ಅಧೋಗತಿಗೆ ತಳ್ಳುತ್ತಿದೆ. ಹೀಗಾಗಿ ರಾಜ್ಯಕ್ಕೆ ಬರುವ ತೆರಿಗೆ ಹಣವನ್ನು ರಾಜ್ಯಕ್ಕೆ ನೀಡಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.