ಕರ್ನಾಟಕ

karnataka

ETV Bharat / state

ಕಾಂಗ್ರೆಸ್​ನಲ್ಲಿ ಭಿನ್ನಾಭಿಪ್ರಾಯವಿಲ್ಲ, ಎಲ್ಲರೂ ಒಗ್ಗಟ್ಟಾಗಿದ್ದೇವೆ : ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ - ಪಕ್ಷ ಸಂಘಟನೆ ಕುರಿತು ರಾಮಲಿಂಗಾರೆಡ್ಡಿ ಹೇಳಿಕೆ

ಕಾಂಗ್ರೆಸ್ ಪಕ್ಷದಲ್ಲಿ ಒಗ್ಗಟ್ಟಿದೆ. ಸಣ್ಣಪುಟ್ಟ ಸಮಸ್ಯೆಗಳು ಇದ್ದೇ ಇರುತ್ತದೆ. ಬಿಜೆಪಿಯಲ್ಲಿ ಇಲ್ವಾ? ಅವರಲ್ಲಿ ಎಷ್ಟು ಭಿನ್ನಾಭಿಪ್ರಾಯಗಳಿವೆ. ನಮ್ಮಲ್ಲಿ ಅಂತಹ ಯಾವುದೇ ಭಿನ್ನಾಭಿಪ್ರಾಯ ಇಲ್ಲಾ, ಎಲ್ಲರೂ ಒಗ್ಗಟ್ಟಾಗಿದ್ದೇವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಮಾಜಿ ಸಚಿವ ರಾಮಲಿಂಗಾರೆಡ್ಡಿ ಸಿದ್ದರಾಮಯ್ಯ ಡಿ.ಕೆ. ಶಿವಕುಮಾರ ಅವರ ನಡುವಿನ ಮುಸುಕಿನ ಗುದ್ದಾಟದ ಕುರಿತು ಸ್ಪಷ್ಟನೆ ನೀಡಿದರು.

ramalingareddi-clarification-on-siddaramiah-dk-shivakumar-hidden-fighter
ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ

By

Published : Feb 28, 2021, 4:21 PM IST

ಬಾಗಲಕೋಟೆ : ನಮ್ಮಲ್ಲಿ ಅಂತಹ ಯಾವುದೇ ಭಿನ್ನಾಭಿಪ್ರಾಯ ಇಲ್ಲ, ಎಲ್ಲರೂ ಒಗ್ಗಟ್ಟಾಗಿದ್ದೇವೆ. ಪಕ್ಷ ಸಂಘಟನೆಯ ಹಿನ್ನೆಲೆ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಸೋತ ಕ್ಷೇತ್ರಗಳಿಂದ ಪ್ರವಾಸ ಹಮ್ಮಿಕೊಳ್ಳಲಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಮಾಜಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.

ನಗರದ ನವನಗರದ ನೂತನ ಕಾಂಗ್ರೆಸ್ ಭವನ ಕಟ್ಟಡಕ್ಕೆ ಭೇಟಿ ನೀಡಿ ವೀಕ್ಷಣೆ ಮಾಡಿದ ಬಳಿಕ ಮಾಜಿ‌ ಸಿಎಂ ಸಿದ್ದು ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ‌.ಕೆ. ಶಿವಕುಮಾರ ನಡುವಿನ ಮುಸುಕಿನ ಗುದ್ದಾಟಕ್ಕೆ ಪ್ರತಿಕ್ರಿಯೆ ನೀಡಿ, ಕಾಂಗ್ರೆಸ್ ಪಕ್ಷದಲ್ಲಿ ಒಗ್ಗಟ್ಟಿದೆ. ಸಣ್ಣಪುಟ್ಟ ಸಮಸ್ಯೆಗಳು ಇದ್ದೇ ಇರುತ್ತದೆ. ಬಿಜೆಪಿಯಲ್ಲಿ ಇಲ್ವಾ? ಅವರಲ್ಲಿ ಎಷ್ಟು ಭಿನ್ನಾಭಿಪ್ರಾಯಗಳಿವೆ ಎಂದು ಪ್ರಶ್ನಿಸಿ, ನಮ್ಮಲ್ಲಿ ಅಂತಹ ಯಾವುದೇ ಭಿನ್ನಾಭಿಪ್ರಾಯ ಇಲ್ಲ, ಎಲ್ಲರೂ ಒಗ್ಗಟ್ಟಾಗಿದ್ದೇವೆ ಎಂದು ಹೇಳಿದರು.

ಪಕ್ಷ ಸಂಘಟನೆಯ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಸೋತ ಕ್ಷೇತ್ರಗಳಿಂದ ಪ್ರವಾಸ ಹಮ್ಮಿಕೊಳ್ಳಲಾಗಿದೆ. ನೂರು ಕ್ಷೇತ್ರಕ್ಕೂ ಅಧಿಕ ಕಡೆಗಳಲ್ಲಿ ಸಂಘಟನೆಗೆ ಪ್ರವಾಸ ಹಮ್ಮಿಕೊಳ್ಳಲಾಗುತ್ತಿದ್ದು, 2022ಕ್ಕೆ ಪಕ್ಷ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಪ್ರಯತ್ನಿಸಲಾಗುವುದು.

ನಮ್ಮಲ್ಲಿ ಭಿನ್ನಾಭಿಪ್ರಾಯವಿಲ್ಲ, ಎಲ್ಲರೂ ಒಗ್ಗಟ್ಟಾಗಿದ್ದೇವೆ; ರಾಮಲಿಂಗಾ ರೆಡ್ಡಿ

ದೇಶದಲ್ಲಿ ಕೊಟ್ಟ ಭರವಸೆ ಈಡೇರಿಸಿದ್ದ ಸರ್ಕಾರ ಎಂದ್ರೆ ಸಿದ್ದರಾಮಯ್ಯ ಸರ್ಕಾರ

ಮುಂದಿನ ಸಿಎಂ ಬಗ್ಗೆ ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳುತ್ತದೆ. ಸಿಎಂ ರೇಸ್​​ನಲ್ಲಿ ಡಿಕೆಶಿ ಇದ್ದಾರೆ, ಸಿದ್ದರಾಮಯ್ಯ ಇದ್ದಾರೆ. ಈಗಾಗಲೇ ಹೈಕಮಾಂಡ್ ಸಿಎಂ ಸ್ಥಾನದ ಕುರಿತು ಮಾತನಾಡದಿರಲು ಹೇಳಿದೆ. ಸಿದ್ದರಾಮಯ್ಯ ಸಿಎಂ ಆಗಿದ್ದ ವೇಳೆ ಹಲವು ಜನಪರ ಕಾರ್ಯಕ್ರಮಗಳನ್ನ ನೀಡಿದ್ದಾರೆ. ಅವರು ಸಿಎಂ ಆಗಿದ್ದಾಗ 165 ಭರವಸೆಗಳನ್ನು ಈಡೇರಿಸಲಾಗಿದೆ. ಇಡೀ ದೇಶದಲ್ಲಿ ಕೊಟ್ಟ ಮಾತಿನಂತೆ ಎಲ್ಲಾ ಭರವಸೆಗಳನ್ನು ಈಡೇರಿಸಿದ್ದರೆ ಅದು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಎಂದರು.

ಪೆಟ್ರೋಲ್‌ ಬೆಲೆ ಎಲ್ಲಿಗೆ ಹೋಗಿದೆ ನೋಡಿ

ಬಿಜೆಪಿಯವರಿಗೆ ಆಡಳಿತ ಮಾಡಲು ಬರುವದಿಲ್ಲ. ಕೇವಲ‌ ವಿರೋಧ ಮಾಡಲು ಬರುತ್ತದೆ. ನಾವು ಅಧಿಕಾರದಲ್ಲಿ ಇದ್ದಾಗ ಪೆಟ್ರೋಲ್ ಬೆಲೆ ಹೆಚ್ಚಾಗಿದ್ದರೆ ಯಾವ ರೀತಿ ವಿರೋಧ ಮಾಡ್ತಾ ಇದ್ದರು, ಆದ್ರೆ ಈಗ ಬಿಜೆಪಿ ಆಡಳಿತದಲ್ಲಿ ಪೆಟ್ರೋಲ್‌ ಬೆಲೆ ಎಲ್ಲಿಗೆ ಹೋಗಿದೆ ನೋಡಿ, ಜನರು ಬೇಸತ್ತು‌ ಹೋಗಿದ್ದಾರೆ ಎಂದರು.

ಮೀಸಲಾತಿ ಕುರಿತು ಚರ್ಚೆಯಾಗಿದೆ

ಮೀಸಲಾತಿ ಹೋರಾಟದ ಕುರಿತು ಪ್ರತಿಕ್ರಿಯೆ ನೀಡಿದ ರಾಮಲಿಂಗಾರೆಡ್ಡಿ, ಈ ಕುರಿತು ಪಕ್ಷದ ವೇದಿಕೆಯಲ್ಲಿ ಚರ್ಚೆಯಾಗಿದೆ. ಕೆಪಿಸಿಸಿ ಅಧ್ಯಕ್ಷರು ಮುಂದಿನ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ತಿಳಿಸಿದರು.

ABOUT THE AUTHOR

...view details