ಬಾಗಲಕೋಟೆ: ಜಿಲ್ಲೆಯಲ್ಲಿ 175 ಜನ ಕೋವಿಡ್‍ನಿಂದ ಗುಣಮುಖರಾಗಿ ನಿಗದಿತ ಆಸ್ಪತ್ರೆ ಮತ್ತು ಸಿಸಿಸಿ ಕೇಂದ್ರಗಳಿಂದ ಬಿಡುಗಡೆಯಾಗಿದ್ದು, ಹೊಸದಾಗಿ 17 ಮಂದಿಗೆ ಸೋಕು ತಗುಲಿದ್ರೇ, ಕೊರೊನಾದಿಂದ ಒಬ್ಬರು ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ತಿಳಿಸಿದ್ದಾರೆ.
ಬಾಗಲಕೋಟೆ- 175 ಜನ ಕೋವಿಡ್‍ನಿಂದ ಗುಣಮುಖ: 17 ಮಂದಿಗೆ ಪಾಸಿಟಿವ್ - ಬಾಗಲಕೋಟೆಯಲ್ಲಿಂದು 175 ಜನ ಕೋವಿಡ್‍ನಿಂದ ಗುಣಮುಖ
ಬಾಗಲಕೋಟೆ ಜಿಲ್ಲೆಯ ಕೊರೊನಾ ಪ್ರಕರಣಗಳ ವರದಿ ಇಲ್ಲಿದೆ.
ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 12,834 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಈ ಪೈಕಿ ಒಟ್ಟು 12,190 ಜನ ಕೋವಿಡ್‍ನಿಂದ ಗುಣಮುಖರಾಗಿದ್ದಾರೆ. ಹೊಸದಾಗಿ ದೃಢಪಟ್ಟವರಲ್ಲಿ ಬಾಗಲಕೋಟೆ ತಾಲೂಕಿನಲ್ಲಿ 6, ಬಾದಾಮಿ, ಬೀಳಗಿ, ಜಮಖಂಡಿ ತಲಾ 1, ಹುನಗುಂದ 3, ಮುಧೋಳ 5 ಜನರಿದ್ದು, ಅವರನ್ನು ನಿಗದಿತ ಆಸ್ಪತ್ರೆ ಮತ್ತು ಸಿಸಿಸಿ ಕೇಂದ್ರಗಳಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಜಿಲ್ಲಾ ಕೋವಿಡ್ ಲ್ಯಾಬ್ನಲ್ಲಿ ಪರೀಕ್ಷಿಸಲಾಗುತ್ತಿದ್ದ 1330 ಸ್ಯಾಂಪಲ್‍ಗಳ ವರದಿಯನ್ನು ನಿರೀಕ್ಷಿಸಲಾಗುತ್ತಿದೆ. ಜಿಲ್ಲೆಯಿಂದ ಇಲ್ಲಿಯವರೆಗೆ ಒಟ್ಟು 1,43,871 ಸ್ಯಾಂಪಲ್‍ಗಳನ್ನು ಪರೀಕ್ಷಿಸಲಾಗಿದ್ದು, ಈ 129196 ನೆಗಟಿವ್ ಪ್ರಕರಣ ಹಾಗೂ 130 ಮೃತ ಪ್ರಕರಣ ವರದಿಯಾಗಿರುತ್ತದೆ. ಇನ್ನು 497 ಸಕ್ರಿಯ ಪ್ರಕರಣಗಳು ಇವೆ. ಇಲ್ಲಿವರೆಗೆ ಒಟ್ಟು 413 ಸ್ಯಾಂಪಲ್‍ಗಳು ರಿಜೆಕ್ಟ್ ಆಗಿರುತ್ತವೆ. ಕಂಟೇನ್ಮೆಂಟ್ ಝೋನ್ 162 ಇರುವುದಾಗಿ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
TAGGED:
Bagalkot district news