ಬಾಗಲಕೋಟೆ:ಕಾರ್ಮಿಕ ಇಲಾಖೆ, ಇಂಡಿಯನ್ ರೆಡ್ ಕ್ರಾಸ್ ಸಂಸ್ಥೆ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಯೋಗದಲ್ಲಿ ಕೋವಿಡ್-19 ಸೋಂಕು ತಡೆಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಜಿಲ್ಲಾ ಪಂಚಾಯತ್ ಸಿಇಒ ಗಂಗೂಬಾಯಿ ಮಾನಕರ, ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ, ಉಪ ವಿಭಾಗಾಧಿಕಾರಿ ಎಂ.ಗಂಗಪ್ಪ ಜಂಟಿಯಾಗಿ ಚಾಲನೆ ನೀಡಿದರು.
ಕೋವಿಡ್-19 ವೈರಸ್ ವಿರುದ್ಧ ಜಾಗೃತಿ ಅಭಿಯಾನಕ್ಕೆ ಚಾಲನೆ - corona latest news
ಕೊರೊನಾ ವೈರಸ್ ವಿರುದ್ಧ ಜಾಗೃತಿ ಮೂಡಿಸುವ ಸಲುವಾಗಿ ಬಾಗಲಕೋಟೆಯಲ್ಲಿ ಅಭಿಯಾನಕ್ಕೆ ಚಾಲನೆ ನೀಡಲಾಯಿತು.
ಜಿಲ್ಲಾಡಳಿತ ಭವನದ ಮುಖ್ಯ ದ್ವಾರದಲ್ಲಿ ಶುಕ್ರವಾರ ಜಾಗೃತಿ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಜಿಪಂ ಸಿಇಒ ಗಂಗೂಬಾಯಿ ಮಾನಕರ, 6 ವಾಹನಗಳ ಮೂಲಕ ಜಿಲ್ಲೆಯಾದ್ಯಂತ ಸಂಚರಿಸುವ ಮೂಲಕ ಜನರಲ್ಲಿ ಮಹಾಮಾರಿ ಕೊರೊನಾ ಸೋಂಕು ಹರಡದಂತೆ ಮುಂಜಾಗ್ರತಾ ಕ್ರಮ, ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಕುರಿತು ಹಾಗೂ ಸ್ವಚ್ಛತೆ ಬಗ್ಗೆ ಧ್ವನಿವರ್ಧಕ ಮತ್ತು ಜಾಗೃತಿಯ ಕರಪತ್ರಗಳನ್ನು ಹಂಚುವ ಮೂಲಕ ಜಾಗೃತಿ ಮೂಡಿಸಲಿದ್ದಾರೆಂದು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ ಸುಳ್ಳೊಳ್ಳಿ, ನಗರಸಭೆ ಪೌರಾಯುಕ್ತ ಮುನಿಶಾಮಪ್ಪ, ಜಿಲ್ಲಾ ಕಾರ್ಮಿಕ ಅಧಿಕಾರಿ ಬಿ.ಆರ್.ಜಾಧವ, ಭಾರತೀಯ ರೆಡ್ ಕ್ರಾಸ್‍ನ ಆನಂದ ಜಿಗಜಿನ್ನಿ, ವೀರಣ್ಣ ಅಥಣಿ, ರವಿ ಕುಮಟಗಿ, ಪ್ರವೀಣ ಹಿರೇಕುಂಬಿ, ಸಿ.ಬಿ.ಸೋಲಾಪೂರ, ವಿನೋದ ಪಾಗದ ಸೇರಿದಂತೆ ಇತರರು ಉಪಸ್ಥಿತರಿದ್ದರು.