ಕರ್ನಾಟಕ

karnataka

ETV Bharat / state

ಅಮಿತ್​ ಶಾ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿ: ಎಸ್.ಆರ್.ಹಿರೇಮಠ - ಬಾಗಲಕೋಟೆ ಲೆಟೆಸ್ಟ್ ನ್ಯೂಸ್

ಬಿಜೆಪಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿ ಆಯ್ಕೆ ಆದ ನಂತರ ಇಲ್ಲಿಯವರೆಗೆ ಅಮಿತ್ ಶಾ ಜಾತಿಗಳ ನಡುವೆ ವಿಷ ಬೀಜ ಬಿತ್ತಿ ಒಡೆದು ಆಳುವ ನೀತಿ ಅನುಸರಿಸುತ್ತಿದ್ದು, ಸಂವಿಧಾನ ವಿರೋಧಿ ನೀತಿ ಅನುಸರಿಸುತ್ತಿರುವ ಹಿನ್ನೆಲೆ ಗೃಹ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಸಮಾಜ ಪರಿವರ್ತನಾ ಸಮುದಾಯದ ಮುಖಂಡ ಎಸ್.ಆರ್.ಹಿರೇಮಠ ಒತ್ತಾಯಿಸಿದ್ದಾರೆ.

S R Hiremata outrage against Amith Sha
ಎಸ್.ಆರ್. ಹಿರೇಮಠ

By

Published : Feb 29, 2020, 5:19 PM IST

ಬಾಗಲಕೋಟೆ:ಬಿಜೆಪಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿ ಆಯ್ಕೆ ಆದ ನಂತರ ಇಲ್ಲಿಯವರೆಗೆ ಅಮಿತ್ ಶಾ ಜಾತಿಗಳ ನಡುವೆ ವಿಷ ಬೀಜ ಬಿತ್ತಿ ಒಡೆದು ಆಳುವ ನೀತಿ ಅನುಸರಿಸುತ್ತಿದ್ದು, ಸಂವಿಧಾನ ವಿರೋಧಿ ನೀತಿ ಅನುಸರಿಸುತ್ತಿರುವ ಹಿನ್ನೆಲೆ ಗೃಹ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಸಮಾಜ ಪರಿವರ್ತನಾ ಸಮುದಾಯದ ಮುಖಂಡ ಎಸ್.ಆರ್.ಹಿರೇಮಠ ಒತ್ತಾಯಿಸಿದ್ದಾರೆ.

ಸಂತ ಶರಣರ ಸಂದೇಶ ಯಾತ್ರೆ

ನಗರದಲ್ಲಿ ಸಂತ ಶರಣರ ಸಂದೇಶ ಯಾತ್ರೆ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ದೆಹಲಿ ಗಲಾಟೆ ತಡೆಯಲು ಯಾವುದೇ ಕ್ರಮ ತೆಗೆದುಕೊಳ್ಳದೆ ಪ್ರಚೋದನೆ‌ ನೀಡಿರುವುದು ನಾಚಿಗೇಡಿನ ಸಂಗತಿಯಾಗಿದೆ. ಬಿಜೆಪಿ ಪಕ್ಷದಲ್ಲಿ ಅಮಿತ್ ಶಾ, ಯಡಿಯೂರಪ್ಪ, ಜನಾರ್ದನ ರೆಡ್ಡಿ ಹಾಗೂ ಆನಂದ್​ ಸಿಂಗ್ ಸಂವಿಧಾನ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿದ್ದಾರೆ. ರಾಜಕೀಯ ರಂಗದಲ್ಲಿ ನಾಯಕರಾಗಲು ಇವರು ಯೋಗ್ಯರಲ್ಲ ಎಂದು ವಾಗ್ದಾಳಿ ನಡೆಸಿದರು.

ಫೆ. 24ರಂದು ಪ್ರಾರಂಭವಾದ ಸಂತ ಶರಣರ ಸಂದೇಶ ಯಾತ್ರೆ ನಾಳೆ ಕೂಡಲಸಂಗಮದಲ್ಲಿ ಮುಕ್ತಾಯವಾಗಲಿದ್ದು, ಸ್ವಾಮೀಜಿಗಳು, ವಿಚಾರವಂತರು, ಬುದ್ಧಿಜೀವಿಗಳು ಹಾಗೂ ರೈತಪರ ಹೋರಾಟಗಾರರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ABOUT THE AUTHOR

...view details