ಬಾಗಲಕೋಟೆ:ಪುಲ್ವಾಮದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಹುತಾತ್ಮರಾದ ವೀರ ಯೋಧರಿಗೆ ಜಿಲ್ಲೆಯ ಬಾದಾಮಿ ಪಟ್ಟಣದಲ್ಲಿರುವ ಮಹಾಕೂಟೇಶ್ವರ ಹಿರಿಯ ಪ್ರಾಥಮಿಕ ಶಾಲೆ ಆಡಳಿತ ಮಂಡಳಿಯವರು ಗೌರವ ಸಲ್ಲಿಸಿದರು.
ಹುತಾತ್ಮ ಯೋಧರಿಗೆ ಶಾಲಾ ಮಕ್ಕಳಿಂದ ಗೌರವ ನಮನ - tribute
ಪುಲ್ವಾಮದಲ್ಲಿ ಉಗ್ರರು ನಡೆಸಿದ ಭೀಕರ ದಾಳಿಗೆ 45ಕ್ಕೂ ಹೆಚ್ಚು ಯೋಧರು ಹುತಾತ್ಮರಾಗಿರುವುದಕ್ಕೆ ಇಡೀ ದೇಶವೇ ಶೋಕಸಾಗರದಲ್ಲಿ ಮುಳುಗಿದ್ದು, ರಾಜ್ಯದಾದ್ಯಂತ ಗೌರವ ನಮನ ಸಲ್ಲಿಸುತ್ತಿದ್ದಾರೆ.
ಮಹಾಕೂಟೇಶ್ವರ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಂದ ಹುತಾತ್ಮರಾದ ವೀರ ಯೋಧರಿಗೆ ಗೌರವ ಸಲ್ಲಿಸುತ್ತಿರುವುದು.
ಶಾಲೆಯಲ್ಲಿರುವ ಎಲ್ಲಾ ಮಕ್ಕಳಿಗೆ ಸೈನಿಕರ ಡ್ರೇಸ್ನ್ನು ಹಾಕಿಸಿ ಇಡೀ ಪಟ್ಟಣದಲ್ಲಿ ಮೆರವಣಿಗೆ ನಡೆಸಿದರು. ಈ ಮೂಲಕ ದೇಶ, ಯೋಧರ ಬಗ್ಗೆ ಭಕ್ತಿ ಹಾಗೂ ಗೌರವ ಸಲ್ಲಿಸಿದರು. ಪುಲ್ವಾಮದಲ್ಲಿ ನಡೆದ ಉಗ್ರರ ದಾಳಿಯನ್ನು ದಾಳಿ ಖಂಡಿಸಿ ಉಗ್ರರ ವಿರುದ್ಧ ಘೋಷಣೆ ಕೂಗಿದರು.
ಭಾರತ ಮಾತಾಕೀ ಜೈ ಎಂಬ ಘೋಷಣೆ ಕೂಗಿ, ರಾಷ್ಟ್ರ ಗೀತೆ ಹಾಡುವ ಮೂಲಕ ಹುತಾತ್ಮರಾದ ವೀರ ಯೋಧರಿಗೆ ಗೌರವ ನಮನ ಸಲ್ಲಿಸಿದರು.