ಬಾಗಲಕೋಟೆ:ಮಾಜಿ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಸ್ವಕ್ಷೇತ್ರ ಬಾದಾಮಿಗೆ ಇಂದು ಭೇಟಿ ನೀಡಿದ್ದಾರೆ. ಪ್ರವಾಹದಲ್ಲಿ ಸಿಲುಕಿ ನಲುಗಿದ ಗ್ರಾಮಗಳಿಗೆ ಭೇಟಿ ನೀಡಿ ಸಂತ್ರಸ್ತರಿಗೆ ಸಾಂತ್ವನ ಹೇಳಿದರು.
ಕಣ್ಣು ನೋವಿನ ಕಾರಣ ಪ್ರಕೃತಿ ವಿಕೋಪಕ್ಕೀಡಾದ ಉತ್ತರ ಕರ್ನಾಟಕ ಪ್ರವಾಸ ಮಾಡಲು ಸಾಧ್ಯವಾಗಿರಲಿಲ್ಲ ಎಂದು ಹೇಳಿದ್ದ ಮಾಜಿ ಸಿಎಂ ಭಾರಿ ಟೀಕೆಯನ್ನೇ ಎದುರಿಸಿದ್ದರು. ಅದಾದ ಬಳಿಕ ಈಗ ಅವರು ಬಾದಾಮಿ ಕ್ಷೇತ್ರದಲ್ಲಿ ಹಲವು ಗ್ರಾಮಗಳಿಗೆ ಭೇಟಿ ನೀಡಿ ಸಂತ್ರಸ್ತರ ಅಳಲು ಹಾಗೂ ಅಹವಾಲು ಆಲಿಸುತ್ತಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಪ್ರವಾಹದಿಂದ ಹಾನಿಗೊಳಗಾಗಿರುವ ಬಾದಾಮಿ ವಿಧಾನಸಭೆ ಕ್ಷೇತ್ರದ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ, ಸಂತ್ರಸ್ತರ ಅಹವಾಲು ಆಲಿಸಿದೆ ಎಂದಿದ್ದಾರೆ.
ಈ ಸಂಬಂಧ ಇನ್ನೊಂದು ಟ್ವೀಟ್ ಮಾಡಿರುವ ಅವರು, ಪ್ರವಾಹದಿಂದ ಹಾನಿಗೊಳಗಾಗಿರುವ ಗದಗ ಜಿಲ್ಲೆಯ ನರಗುಂದ ವಿಧಾನಸಭೆ ಕ್ಷೇತ್ರದ ಕೊಣ್ಣೂರು ಗ್ರಾಮಕ್ಕೆ ಭೇಟಿ ನೀಡಿ, ಸಂತ್ರಸ್ತರ ಅಹವಾಲು ಆಲಿಸಿದೆ ಹಾಗೂ ಸಮೀಪದ ಮರು ವಸತಿ ಕೇಂದ್ರಕ್ಕೂ ಭೇಟಿ ನೀಡಿ ಪರಿಶೀಲನೆ ನಡೆಸಿದೆ ಎಂದು ಬರೆದುಕೊಂಡಿದ್ದಾರೆ. ಈ ಸಂಬಂಧ ಫೋಟೊಗಳನ್ನ ಸಹ ಅಪ್ಲೋಡ್ ಮಾಡಿದ್ದಾರೆ.