ಬಾಗಲಕೋಟೆ: ಮಾಜಿ ಸಿಎಂ ಸಿದ್ದರಾಮಯ್ಯ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ್ ಹಾಗೂ ಸ್ಥಳೀಯ ಪಂಚಮಸಾಲಿ ಪೀಠದ ಜಯ ಮೃತ್ಯುಂಜನ ಸ್ವಾಮೀಜಿಗಳ ನೇತೃತ್ವದಲ್ಲಿ ಬಸವಣ್ಣನವರ ಐಕ್ಯ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕೂಡಲಸಂಗಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಮಾಜಿ ಸಿಎಂ ಸಿದ್ದರಾಮಯ್ಯ
ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕೂಡಲಸಂಗಮದಲ್ಲಿ ಬಸವಣ್ಣನವರ ಐಕ್ಯ ಮಂಟಪಕ್ಕೆ ಭೇಟಿ ನೀಡಿ,ಪರಿಶೀಲನೆ ನಡೆಸಿದರು.
ಇತ್ತೀಚೆಗೆ ಬಸವಣ್ಣನವರ ಐಕ್ಯ ಸ್ಥಳದಲ್ಲಿ ಬಿರುಕು ಗೊಂಡಿದ್ದರಿಂದ, ಇಲ್ಲಿಗೆ ಭೇಟಿ ನೀಡಿ ಸಿದ್ದರಾಮಯ್ಯ ಸಮಗ್ರ ಮಾಹಿತಿ ಪಡೆದುಕೊಂಡ್ರು. ಐಕ್ಯ ಮಂಟಪದಲ್ಲಿ ಗೋಡೆ ಹಾಗೂ ಆಧಾರ ಸ್ಥಂಭಗಳಲ್ಲಿ ಬಿರುಕು ಕಾಣಿಸಿಕೊಂಡಿರುವುದನ್ನು ಪರಿಶೀಲಿಸಿದರು.
ಮಾಧ್ಯಮ ಪತ್ರಿನಿಧಿಗಳೊಂದಿಗೆ ಮಾತನಾಡುತ್ತಾ, ಐಕ್ಯ ಮಂಟಪ ಶಿಥಿಲಗೊಂಡಿದೆ. ಇದಕ್ಕಾಗಿ ಅಧಿಕಾರಿಗಳು ಕ್ರಮ ತೆಗೆದುಕೊಂಡಿದ್ದಾರೆ. ತಜ್ಞರೆಲ್ಲ ನೋಡಿದ್ದಾರೆ. ನಾನು ಕೂಡ ಐಕ್ಯಸ್ಥಳದ ಬಗ್ಗೆ ಸರಕಾರಕ್ಕೆ ಪತ್ರ ಬರೆಯುತ್ತೇನೆ. ಆದಷ್ಟು ಬೇಗ ಕಾಮಗಾರಿ ಆರಂಭಿಸುವಂತೆ ಸರಕಾರಕ್ಕೆ ಒತ್ತಾಯ ಮಾಡುತ್ತೇನೆ ಎಂದ್ರು.
ಕೂಡಲಸಂಗಮಕ್ಕೆ ಪ್ರತಿನಿತ್ಯವೂ ಭಕ್ತರು ಬರುತ್ತಾರೆ. ವರ್ಷಕ್ಕೆ ಎಂಟ ರಿಂದ ಹತ್ತು ಲಕ್ಷ ಭಕ್ತರು ಬರುತ್ತಾರೆ. ಹೀಗಾಗಿ ಶೀಘ್ರವಾಗಿ ಕೆಲಸ ಮಾಡುವಂತೆ ತಿಳಿಸುತ್ತೇನೆ ಎಂದರು.ಜಿಲ್ಲೆಯ ಉಸ್ತುವಾರಿ ಸಚಿವರಾದ ಶಿವಾನಂದ ಪಾಟೀಲ್, ಮಾಜಿ ಸಚಿವರಾದ ಉಮಾಶ್ರೀ, ಹೆಚ್. ವೈ. ಮೇಟಿ, ಸೇರಿದಂತೆ ಇತರ ರಾಜಕೀಯ ಮುಖಂಡರು ಹಾಜರಿದ್ದರು.